ಕ್ರೈಸ್ಟ್ ಯೂನಿವರ್ಸಿಟಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಕ್ರೈಸ್ಟ್ ಯೂನಿವರ್ಸಿಟಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಆದೇಶ ಗಾಳಿಗೆ ತೂರಿದ ಕ್ರೈಸ್ಟ್ ಯೂನಿವರ್ಸಿಟಿ..

ಡಿಗ್ರಿ ವಿದ್ಯಾರ್ಥಿಗಳಿಗೆ ಇಂದಿನಿಂದ ಆನ್ ಲೈನ್ ಪರೀಕ್ಷೆ

ಆನ್ ಲೈನ್ ಪರೀಕ್ಷೆ ನಡೆಸದಂತೆ ಎನ್.ಎಸ್.ಯು.ಐ ವಿದ್ಯಾರ್ಥಿ ಘಟಕ ಪ್ರತಿಭಟನೆ

ಡೈರಿ ಸರ್ಕಲ್ ಬಳಿ ಇರುವ ಕ್ರೈಸ್ಟ್ ಯೂನಿವರ್ಸಿಟಿ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ಒಂದು ದಿನ ಕ್ಲಾಸ್ ನಡೆದಿಲ್ಲ.

ಆನ್ ಲೈನ್ ಪಾಠ ನಮಗೆ ಅರ್ಥ ಆಗಿಲ್ಲ

ಹೀಗಾಗಿ ಪರೀಕ್ಷೆ ನಡೆಸದಂತೆ ವಿವಿ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ನಾಳೆ ರಾತ್ರಿಯಿಂದ ಲಾಕ್ ಡೌನ್ ಇರಲಿದೆ

ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ಒತ್ತಾಯ

ವಿದ್ಯಾರ್ಥಿಗಳ ಮನವಿ ಸ್ವೀಕರಿಸದ ಯೂನಿವರ್ಸಿಟಿ ಕುಲಪತಿಗಳು

ವಿವಿ ಕ್ಯಾಂಪಸ್ ಗೇಟ್ ಬೀಗ ಹಾಕಿ‌ ವಿದ್ಯಾರ್ಥಿಗಳ ಆಕ್ರೋಶ

ಪ್ರತಿಭಟನೆಯಲ್ಲಿ ತೊಡಗಿದ್ದ ವಿದ್ಯಾರ್ಥಿಗಳನ್ನ ವಶಕ್ಕೆ ಪಡೆದ ಪೊಲೀಸರು

City Today News

(citytoday.media)

9341997936

ರಾಜ್ಯದಲ್ಲಿ ಶರವೇಗದಲ್ಲಿ ಹರಡುತ್ತಿರುವ ಮಹಾಮಾರಿ ಕರೋನ ವೈರಸ್ ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೇ ತಿಂಗಳು 14ರ ರಾತ್ರಿ 8 ಗಂಟೆ ಯಿಂದ ಲಾಕ್ ಡೌನ್ ಜಾರಿ ಮಾಡಿದೆ ಇದು ಸ್ವಾಗತಾರ್ಹ – ಹೆಚ್.ಡಿ. ದೇವೇಗೌಡಮಾಜಿ ಪ್ರಧಾನ ಮಂತ್ರಿ

ರಾಜ್ಯದಲ್ಲಿ ಶರವೇಗದಲ್ಲಿ ಹರಡುತ್ತಿರುವ ಮಹಾಮಾರಿ ಕರೋನ ವೈರಸ್ ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೇ ತಿಂಗಳು 14ರ ರಾತ್ರಿ 8 ಗಂಟೆ ಯಿಂದ ಲಾಕ್ ಡೌನ್ ಜಾರಿ ಮಾಡಿದೆ ಇದು ಸ್ವಾಗತಾರ್ಹ ಇದರ ಜೊತೆಗೆ ಇಡಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಲು ಮಾಧ್ಯಮಗಳ ಮುಖೇನ ರಾಜ್ಯ ಸರ್ಕಾರವನ್ನು ನಾನು ಆಗ್ರಹಿಸುತ್ತೀನಿ

ರಾಜ್ಯದ ಜನತೆಯ ಜೊತೆಗೆ ನಮ್ಮ ಇಡಿ ದೇಶದ ಜನತೆಗೆ ನಾನು ಮನವಿ ಮಾಡಿಕೊಳ್ಳುತ್ತೀನಿ ನಮಗೆ ಆರೋಗ್ಯವೇ ಭಾಗ್ಯ ಆದ್ದರಿಂದ ದಯವಿಟ್ಟು ಮನೆಯಿಂದ ಹೊರ ಹೋಗಬೇಕಾದರೆ ದಯವಿಟ್ಟು ಮಾಸ್ಕ್ ಧರಿಸಿ ,, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ,, ಏನೇ ಮುಟ್ಟಬೇಕಾದರು ಸ್ಯಾನಿಟೈಸರ್ ನಿಂದ ಕೈ ಅನ್ನು ಸ್ವಚ್ಛ ಗೊಳಿಸಿ ನಂತರ ಮುಟ್ಟಿ ,, ಮುಖ್ಯವಾದ ಕೆಲಸ ಕಾರ್ಯಗಳು ಇದ್ದರೆ ಮಾತ್ರ ಮನೆಯಿಂದ ಹೊರ ಬನ್ನಿ

ಇನ್ನೊಂದು ಪ್ರಮುಖವಾದ ವಿಷಯ ಈ ಮಹಾಮಾರಿ ವೈರಸ್ಸನ್ನು ತಡೆಗಟ್ಟಲು ರಾಜ್ಯ ಸರ್ಕಾರ ಅನೇಕ ಪ್ಯಾಕೇಜುಗಳನ್ನು ಘೋಷಿಸಿದೆ ಅದರಲ್ಲಿ ಅವ್ಯವಹಾರ ನಡೆದಿದೆ ಎಂದು ಅನೇಕ ನಾಯಕರುಗಳು ಆಪಾದಿಸುತ್ತಿದ್ದಾರೆ ಅದೇನೇ ಇದ್ದರೂ ಮುಂಬರುವ ಅಧಿವೇಶನದಲ್ಲಿ ಚರ್ಚೆಮಾಡಲಿ ಈಗ ನಮಗೆ ಜನತೆಯ ಆರೋಗ್ಯ ಮುಖ್ಯ ,, ಮೊದಲು ನಾವೆಲ್ಲ ಅದರ ಕಡೆ ಗಮನ ಹರಿಸೋಣ ಸರ್ಕಾರವು ಸಹ ಇದರ ನಿಟ್ಟಿನಲ್ಲಿ ಕೆಲಸ ಮಾಡಬೇಕು ನಾವೆಲ್ಲ ಜೊತೆಗಿದ್ದೀವಿ ,, ಜನತೆಯ ಆರೋಗ್ಯದ ಜೊತೆ ಚೆಲ್ಲಾಟ ಬೇಡ ,, ದಯವಿಟ್ಟು ಇನ್ನು ಮುಂದಾದರು ಎಚ್ಚೆತ್ತು ಕೆಲಸ ಮಾಡಿ ಎಂದು ಮನವಿ ಮಾಡುತ್ತೀನಿ

-ಹೆಚ್.ಡಿ. ದೇವೇಗೌಡ
ಮಾಜಿ ಪ್ರಧಾನ ಮಂತ್ರಿ

City Today News

(citytoday.media)

9341997936

ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಮುಂದಿನ 8 ದಿನಗಳ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು – ಸಚಿವ ಶ್ರೀ ರಮೇಶ್ ಜಾರಕಿಹೊಳಿ

ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಮುಂದಿನ 8 ದಿನಗಳ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಾಜ್ಯದ ಜಲಸಂಪನ್ಮೂಲ ಇಲಾಖೆಯ ಸಚಿವ ಶ್ರೀ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಗೋಕಾಕ್ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದ ಸಚಿವರು, ನಾಳೆ ಸೋಮವಾರ ರಾತ್ರಿಯಿಂದ ಮುಂದಿನ 8 ದಿನಗಳ ಕಾಲ ಸ್ವಯಂಪ್ರೇರಿತ ಲಾಕ್ ಡೌನ್ ನಡೆಯಲಿದೆ ಎಂದು ತಿಳಿಸಿದರು.

ಜೀವ ಇದ್ದರೆ ಮಾತ್ರ ಜೀವನ. ಹಾಗಾಗಿ ಈ ಕೊರೋನಾ ಸೋಂಕು ನಿವಾರಿಸಲು ಅನಿವಾರ್ಯವಾಗಿ ಲಾಕ್ ಡೌನ್ ಘೋಷಿಸಬೇಕಾಗಿದೆ. ತಾಲ್ಲೂಕಿನ ಎಲ್ಲಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಲಹೆ ಪಡೆಯಲಾಗಿದೆ. ಜನರು ಸಹಕರಿಸಬೇಕೆಂದು ಸಚಿವರು ಕೋರಿದರು.
ಈ‌ ಲಾಕ್ ಡೌನ್ ಅವಧಿಯಲ್ಲಿ ಜನರಿಗೆ ಅಗತ್ಯವಿರುವ ಸಾಮಗ್ರಿಗಳು ದೊರೆಯಲಿವೆ. ಆದರೆ ಎಲ್ಲರೂ ಸಾಮಾಜಿಕ ವ್ಯಕ್ತಿಗತ ಅಂತರ ಕಾಪಾಡಿಕೊಂಡಿರಬೇಕು. ಕಾರಣವಿಲ್ಲದೇ ಯಾರೂ‌ ಮನೆಯಿಂದ ಹೊರಗೆ ಬರಬಾರದು. ಸೋಂಕು ಕಡಿಮೆ‌ ಮಾಡಲು ಇದೊಂದೇ ದಾರಿ. ಆದ್ದರಿಂದ ಸರ್ಕಾರದ ನಿರ್ಧಾರವನ್ನು ಪಾಲಿಸುವಂತೆ ಜನತೆಗೆ ಕರೆ‌ ನೀಡಿದರು.
ಟಾಸ್ಕ್ ಫೋರ್ಸ್ ಸಭೆಯಲ್ಲಿ ಗೋಕಾಕ್ ತಹಶಿಲ್ದಾರ್ ಪ್ರಕಾಶ್ ಹೊಳೆಯಪ್ಪಗೋಳ್, ಪೌರಾಯುಕ್ತ ಶಿವಾನಂದ ಹಿರೇಮಠ, ಪೊಲೀಸ್ ಇನ್ಸ್ಪೆಕ್ಟರ್ ಗೋಪಾಲ್ ರಾಥೋಡ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಬಸವರಾಜ ಹೆಗ್ಗನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವ್ಯಾಪಾರಸ್ಥರು, ನಗರ ಸಭೆ ಸದಸ್ಯರು ಪಾಲ್ಗೊಂಡಿದ್ದರು.

City Today News

(citytoday.media)

9341997936

ಸಿದ್ದರಾಮಯ್ಯನವರ ಆರೋಪ ಸತ್ಯಕ್ಕೆ ದೂರವಾದ ಮಾತು ಸಚಿವ ನಾರಾಯಣಗೌಡ

ಬಿಜಿ ನಗರದಲ್ಲಿ ಹಾಪ್‍ಕಾಮ್ಸ್ ಮಳಿಗೆ ಉದ್ಘಾಟಸಿದ ಸಚಿವ ನಾರಾಯಣಗೌಡ

ನಾಗಮಂಗಲ: ತಾಲ್ಲೂಕಿನ ಬಿಜಿ ನಗರದಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆ ಮುಂಭಾಗ ನೂತನ‌ ಹಾಪ್ ಕಾಮ್ಸ್ ಮಳಿಗೆಯನ್ನು ಸಚಿವ ನಾರಾಯಣ ಗೌಡ ಉದ್ಘಾಟಿಸಿದರು.

ಉದ್ಘಾಟನೆ ಕಾರ್ಯಕ್ರಮದ ನಂತರ ಮಾತನಾಡಿದ ಸಚಿವ ನಾರಾಯಣಗೌಡ ರವರು ಸಿದ್ದರಾಮಯ್ಯನವರ ಆರೋಪ ಸತ್ಯಕ್ಕೆ ದೂರವಾದ ಮಾತು ಕೊರೊನಾ ಸುರಕ್ಷತಾ ವಸ್ತುಗಳನ್ನು ಖರೀದಿ ಮಾಡುವಾಗ ಸರ್ಕಾರ ಯಾವುದೇ ಮೋಸದ ಕೆಲಸ ನಡೆಸಿಲ್ಲ. ಯಾರಾದರೂ ತನಿಖೆ ಮಾಡಲಿ, ವಿರೋಧ ಪಕ್ಷದವರಿಗೆ ಮಾಡಲು ಏನೂ ಕೆಲಸವಿಲ್ಲದೇ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಸರ್ಕಾರ ಕೊರೊನಾಗಾಗಿ ಕೇವಲ 600 ಕೋಟಿ ಖರ್ಚು ಮಾಡಿದೆ. ವಿರೋಧ ಪಕ್ಷದವರು ಸರ್ಕಾರ 2-5 ಸಾವಿರ ಕೋಟಿ ಎಂದು ಹೇಳುತ್ತಿದ್ದಾರೆ.ಇದು ನಂಬಲು‌ ಸಾಧ್ಯವಿಲ್ಲದ ಇದು ಸುಳ್ಳು ಆರೋಪ. ವಿರೋಧ ಪಕ್ಷದವರು ಆರೋಪ ಮಾಡುವ ಬದಲು ಕೊರೊನಾ ನಿಯಂತ್ರಣದಲ್ಲಿ ಭಾಗವಹಿಸಿದರೆ ಖುಷಿಯಾಗುತ್ತದೆ. ಮುಖ್ಯಮಂತ್ರಿಗಳು ಯಾವುದೇ ಅಕ್ರಮ ನಡೆಯಲು ಅವಕಾಶ‌ ನೀಡಿಲ್ಲ, ನೀಡುವುದಿಲ್ಲ ಎಂದರು.

ಅಲ್ಲದೇ ಈಗ ಬರುತ್ತಿರುವ ಕೊರೊನಾ ಸುರಕ್ಷತಾ ವಸ್ತುಗಳು ಗುಣಮಟ್ಟದಾಗಿದ್ದು, ಸರ್ಕಾರಕ್ಕೆ ಯಾರು ಸಹ ಅನ್ಯಾಯ ಮಾಡಿಲ್ಲ. ಪ್ರಾರಂಭದಲ್ಲಿ ಚಿಕ್ಕ ತಪ್ಪು, ವ್ಯತ್ಯಾಸವಾಗಿರಬಹುದು.ಅದನ್ನು ಬಿಟ್ಟರೆ ಸರ್ಕಾರ ಜವಾಬ್ದಾರಿಯಿಂದ ನಡೆಯುತ್ತಿದೆ. ಕೋವಿಡ್ ನಿಯಂತ್ರಣದಲ್ಲಿ ತಾಲ್ಲೂಕು ಆಡಳಿತ ದೊಂದಿಗೆ ಜಿಲ್ಲಾಡಳಿತಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿವೆ. ನಮ್ಮ ಜಿಲ್ಲೆಯ ಪ್ರದೇಶಗಳಲ್ಲೂ ಕೂಡ ಕೊರೊನಾ ಹರಡುತ್ತಿದ್ದು, ನಿಯಂತ್ರಣ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದೇನೆ. ಜೊತೆಗೆ ಪ್ರತಿ ತಾಲ್ಲೂಕಿನ ವಿವರವನ್ನು ದಿನನಿತ್ಯ ಪಡೆಯುವ ಮೂಲಕ ಸುಧಾರಣೆ ತರಲು ಕ್ರಮವಹಿಸುತ್ತಿದ್ದೇವೆ ಎಂದರು.

ನಂತರ ಆದಿಚುಂಚನಗಿರಿ ಆಸ್ಪತ್ರೆಗೆ ಭೇಟಿ ನೀಡಿದರು. ಆಡಳಿತ ಮಂಡಳಿಯವರು ರೋಗಿಗಳಿಗೆ ಉಚಿತ ಅಥವಾ ಸರ್ಕಾರದ ಪರಿಹಾರದೊಂದಿಗೆ ಪರೀಕ್ಷಿಸಲು ಅವಕಾಶ ನೀಡಬೇಕು ಎಂದು ಮನವಿ‌ ನೀಡಿದರು. ಅದಕ್ಕೆ ಉತ್ತರಿಸಿದ ಸಚಿವರು ಖಾಸಗಿ ಆಸ್ಪತ್ರೆ ಕೋವಿಡ್ ಸೇವೆ ಮಾಡಲು ಬಂದಿರುವುದು ಪ್ರಮುಖ ವಿಷಯ. ಆದ್ದರಿಂದ ಜಿಲ್ಲಾಧಿಕಾರಿಗಳಿಗೆ ಬೇಗ ಅನುಮೋದನೆ ನೀಡುವಂತೆ ಸೂಚನೆ ನೀಡುತ್ತೇನೆ ಎಂದರು.

ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ಗೌಡ,ತಹಶೀಲ್ದಾರ್ ಕುಂಞಿ ಅಹಮ್ಮದ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಧನಂಜಯ್, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಅನಂತರಾಜು, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಶಾಂತಾ ಮತ್ತು ಆಸ್ಪತ್ರೆ ಸಿಬ್ಬಂದಿ ಇದ್ದರು.

ವರದಿ: ದೇ.ರಾ .ಜಗದೀಶ ನಾಗಮಂಗಲ

City Today News

(citytoday.media)

9341997936

CHIEF MINISTER’S APPEAL TO PEOPLE OF KARNATAKA

In view of sudden surge of COVID 19 cases in Bengaluru and on the advice of the experts, it is decided to impose lockdown for a period of one week in Bengaluru Urban and Rural Districts starting from 8 pm on Tuesday, 14th of July. Detailed guidelines will be issued on Monday in this regard.

During lockdown period, supply of essential commodities like groceries, vegetables, fruits, milk, medicines will continue uninterrupted. MBBS, post graduate examinations will be conducted as scheduled.

I appreciate the tireless efforts of our healthcare and police personnel, ASHA workers, volunteers and media persons in containing COVID 19 pandemic in the state.

I appeal people to cooperate with the Government, wear masks, maintain social distance, follow all guidelines, take all precautionary steps and help us contain the pandemic.

B.S. Yediyurappa

Chief Minister

City Today News

(citytoday.media)

9341997936