ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಶ್ವೇತಪತ್ರಕ್ಕೆ ವಿರೋಧ ಪಕ್ಷಗಳ ನಾಯಕ ಸಿದ್ದರಾಮಯ್ಯನವರ ಆಗ್ರಹ

ಕೊರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಪಾರದರ್ಶಕ ರೀತಿಯಲ್ಲಿ ಕ್ರಮಕೈಗೊಳ್ಳದೆ ಇರುವ ಕಾರಣಕ್ಕೆ ಜನರಲ್ಲಿ ಅನುಮಾನ, ಅಸುರಕ್ಷತೆ, ಅಭದ್ರತೆ ಹುಟ್ಟಿಕೊಂಡಿವೆ. ರಾಜ್ಯ ಸರ್ಕಾರ ತಕ್ಷಣ ತಾನು ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು-ವೆಚ್ಚಗಳ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ ಸಂಪೂರ್ಣ ವಿವರವನ್ನು ಜನತೆಯ ಮುಂದಿಟ್ಟು ಅವರಲ್ಲಿ ವಿಶ್ವಾಸವನ್ನು ತುಂಬುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಆಗ್ರಹಿಸುತ್ತಿದ್ದೇನೆ.
ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಖಜಾನೆಯಿಂದ ಎಷ್ಟು ಖರ್ಚಾಗಿದೆ? ಅದು ಯಾವ ಉದ್ದೇಶಗಳಿಗೆ ಖರ್ಚಾಗಿದೆ? ಇದರಲ್ಲಿ ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್ ಆಮ್ಲಜನಕ ಸಿಲಿಂಡರ್, ಮಾಸ್ಕ್,ಸಾನಿಟೈಸರ್ ಸೇರಿದಂತೆ ಮತ್ತಿತರ ವೈದ್ಯಕೀಯ ಸಲಕರಣೆ ಮತ್ತು ಚಿಕಿತ್ಸೆಗೆ ಖರ್ಚಾದ ಹಣ ಎಷ್ಟು? ಕೇಂದ್ರ ಸರ್ಕಾರದಿಂದ ಈ ವರೆಗೆ ಬಂದಿರುವ ದುಡ್ಡು ಮತ್ತು ವೈದ್ಯಕೀಯ ಸಲಕರಣೆಗಳೆಷ್ಟು? ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಹಾಸಿಗೆಗಳೆಷ್ಟು? ಯಾವ ಮಾನದಂಡದ ಆಧಾರದಲ್ಲಿ ಖಾಸಗಿ ಆಸ್ಪತ್ರೆಗಳ ಶುಲ್ಕ ನಿಗದಿಪಡಿಸಿದೆ? – ಈ ಎಲ್ಲ ವಿವರಗಳನ್ನು ರಾಜ್ಯ ಸರ್ಕಾರ ಜನತೆಯ ಮುಂದಿಡಬೇಕಾಗಿದೆ.
ನಾನು ಹಲವಾರು ಪತ್ರಗಳನ್ನು ಬರೆದು ವಿವರವನ್ನು ಕೇಳಿದರೂ ಇಲಾಖೆಗಳು ಸರಿಯಾದ ಮಾಹಿತಿ ಕೊಡುತ್ತಿಲ್ಲ. ಈ ರೀತಿ ಮಾಹಿತಿಯನ್ನು ನಿರಾಕರಿಸುವುದು ನನ್ನ ಹಕ್ಕುಚ್ಯುತಿಯಾಗುತ್ತದೆ. ಇಷ್ಟು ಮಾತ್ರವಲ್ಲ ಸರ್ಕಾರದ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡಿಸುತ್ತದೆ. ಈ ಬಗ್ಗೆ ಸಂಪೂರ್ಣ ವಿವರವನ್ನು ಶ್ವೇತಪತ್ರದ ಮೂಲಕ ಜನರ ಮುಂದಿಡಬೇಕು .
ರಾಜ್ಯದ 9 ಜಿಲ್ಲೆಗಳಲ್ಲಿ ದೇಶಕ್ಕೆ ಒಂದು ದಿನ ಮೊದಲು ಮಾರ್ಚ್ 23ರಂದು ಲಾಕ್ ಡೌನ್ ಘೋಷಿಸಲಾಯಿತು. ಆಗ ರಾಜ್ಯದಲ್ಲಿ ಒಂದೇ ಒಂದು ಸಾವು ಸಂಭವಿಸಿರಲಿಲ್ಲ, 26 ಮಂದಿ ಸೋಂಕಿತರು ಮಾತ್ರ ಇದ್ದರು. ಇಂದಿನ ವರದಿಯ ಪ್ರಕಾರ ರಾಜ್ಯದ ಸೋಂಕಿತರ ಸಂಖ್ಯೆ 11,923, ಸಾವಿಗೀಡಾದವರ ಸಂಖ್ಯೆ 191 ದಾಟಿದೆ. ಆಗ ಬೆಂಗಳೂರು ಮತ್ತು ಕೆಲವು ಜಿಲ್ಲಾ ಕೇಂದ್ರಗಳಿಗೆ ಸೀಮಿತವಾಗಿದ್ದ ಕೊರೊನಾ ಸೋಂಕು ಈಗ ಹಳ್ಳಿ-ಊರುಗಳೆನ್ನದೆ ವ್ಯಾಪಕವಾಗಿ ಹರಡಿದೆ.
ಕೊರೊನಾ ದಿಡೀರನೇ ಬಂದೆರಗಿಲ್ಲ, ಹಂತಹಂತವಾಗಿ ಕಾಣಿಸಿಕೊಂಡಿದೆ. ಕಳೆದ ಮೂರು ತಿಂಗಳ ಅವಧಿಯನ್ನು ಕೇವಲ ಲಾಕ್ ಡೌನ್ ಹೇರಿಕೆ ಮತ್ತು ಹಿಂತೆಗೆತದಲ್ಲಿ ವ್ಯರ್ಥವಾಗಿ ಕಳೆದ ರಾಜ್ಯ ಸರ್ಕಾರ ಅದನ್ನು ಎದುರಿಸಲು ಯಾವ ತಯಾರಿಯನ್ನೂ ನಡೆಸಿಲ್ಲ. ಮೂರು ತಿಂಗಳ ಅಮೂಲ್ಯ ಸಮಯವನ್ನು ರಾಜ್ಯ ಸರ್ಕಾರ ತನ್ನ ಬೇಜವಾಬ್ದಾರಿತನದಿಂದ ವ್ಯರ್ಥಮಾಡಿದೆ. ಈ ನಿಷ್ಕ್ರೀಯತೆಯ ಫಲವನ್ನು ರಾಜ್ಯದ ಜನತೆ ಅನುಭವಿಸಿದಂತಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಯಾವ ನಿಯಂತ್ರಣವೂ ಇಲ್ಲದೆ ತೀವ್ರಗತಿಯಲ್ಲಿ ಹರಡುತ್ತಿದ್ದು, ಲಾಕ್ ಡೌನ್ ನಲ್ಲಿ ಸುರಕ್ಷಿತವಾಗಿದ್ದ ಹಳ್ಳಿಗಳಲ್ಲೂ ಈಗ ದಿನದಿಂದ ದಿನಕ್ಕೆ ಸೋಂಕು ವ್ಯಾಪಕವಾಗುತ್ತಿದೆ.
ರಾಜ್ಯ ಸರ್ಕಾರದ ಮೇಲಿನ ನಂಬಿಕೆ ಕಳೆದುಕೊಂಡಿರುವ ರಾಜ್ಯದ ಜನತೆ ಕೊರೊನಾ ಭೀತಿಯಿಂದ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ತಮ್ಮನ್ನು ಕೊರೊನಾ ಮಾರಿಯಿಂದ ರಕ್ಷಿಸಬಹುದೆಂಬ ವಿಶ್ವಾಸ ಅವರಿಗಿಲ್ಲದಂತಾಗಿದೆ.
ಈಗಾಗಲೇ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ತುಂಬಿ ಹೋಗಿವೆ. ಖಾಸಗಿ ಆಸ್ಪತ್ರೆಗಳು ಸರ್ಕಾರ ಒಪ್ಪಿಕೊಂಡಿರುವ ಚಿಕಿತ್ಸಾ ಶುಲ್ಕಕ್ಕೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿವೆ. ಸರ್ಕಾರ ಅವರನ್ನು ಒಪ್ಪಿಸಬೇಕು, ಇಲ್ಲವೇ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಎರಡನ್ನೂ ಮಾಡದೆ ಕೈಕಟ್ಟಿ ಕುಳಿತರೆ ಜನರೇನು ಮಾಡಬೇಕು?
ಕಳೆದ 15 ದಿನಗಳಿಂದ ಪರೀಕ್ಷೆ ಮಾಡುವ ಪ್ರಮಾಣ 16 ಸಾವಿರದಿಂದ ಸರಾಸರಿ 11000 ಗಳಿಗೆ ಇಳಿದಿದೆ. ಸೋಂಕು ಸಮುದಾಯಕ್ಕೆ ವ್ಯಾಪಿಸಿಕೊಂಡಿರುವ ಭೀತಿ ಇದೆ.
ರಾಜ್ಯದಲ್ಲಿ 9200 ವೆಂಟಿಲೇಟರ್‍ ತುರ್ತಾಗಿ ಅಗತ್ಯವಿದ್ದರೆ ಈಗ ಲಭ್ಯಇರುವುದು ಕೇವಲ 1500 ಮಾತ್ರ. ಕೇಂದ್ರವನ್ನು 33000 ವೆಂಟಿಲೇಟರ್ ಕಳಿಸಿ ಎಂದು ಕೇಳಿಕೊಂಡರೆ ಅವರು ಇಲ್ಲಿಯ ವರೆಗೆ ಕಳಿಸಿರುವುದು ಕೇವಲ 90 ಮಾತ್ರ. ಆಕ್ಸಿಜನೇಟೆಡ್ ವೆಂಟಿಲೇಟರ್ ಕೇವಲ 7000 ಮಾತ್ರ ಇವೆ. ಅಗತ್ಯ ಇರುವುದು 20000 ವೆಂಟಿಲೇಟರ್ ಎಂದು ಹೇಳಲಾಗಿದೆ.
ಮೆಡಿಕಲ್ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ, ಮಾರುಕಟ್ಟೆ ದರಗಳಿಗಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ. ಇದಕ್ಕೆ ಸಮರ್ಥನೆಗಳಿಲ್ಲ ಎಂದು ಆರ್ಥಿಕಇಲಾಖೆ ಟಿಪ್ಪಣಿ ಇದೆ. ಈ ರೀತಿಯ ಹಣದ ಮೊತ್ತ ಸುಮಾರು 3300 ಕೋಟಿಗಳೆಂಬ ಆರೋಪ ಕೇಳಿಬರುತ್ತಿದೆ.
ರಾಜ್ಯ ಸರ್ಕಾರ ತಕ್ಷಣ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ವಿವರವಾದ ಶ್ವೇತಪತ್ರವನ್ನು ಹೊರಡಿಸಿ ನಿಜ ಪರಿಸ್ಥಿತಿಯನ್ನು ಜನರ ಮುಂದಿಟ್ಟು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೋಂಕು ನಿಯಂತ್ರಣದಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರ ಇದೇ ರೀತಿಯ ಉದಾಸೀನ-ಉಡಾಫೆತನವನ್ನು ಮುಂದುವರಿಸಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಬಹುದು.

-ಸಿದ್ದರಾಮಯ್ಯ
ವಿರೋಧಪಕ್ಷದ ನಾಯಕರು

City Today News

(citytoday.media)

9341997936

ತಾಲ್ಲೂಕು ಆಡಳಿತ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ.

ನಾಗಮಂಗಲ: ಕೋವಿಡ್ -19 ಸೋಂಕಿನ ಹಿನ್ನೆಲೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯನ್ನು ಸರಳ ಹಾಗೂ ಸಾಂಕೇತಿಕವಾಗಿ ಪಟ್ಟಣದ ಮಿನಿ ವಿಧಾನಸೌಧದ ಕಚೇರ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ತಹಶೀಲ್ದಾರ್ ಕುಂಞಿ ಅಹಮದ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ್ ರವರು ನಮ್ಮ ನಾಡಿಗೆ ಸಿಲಿಕಾನ್ ಸಿಟಿಯನ್ನು ಕಟ್ಟಿಕೊಟ್ಟವರು ನಾಡಪ್ರಭು ಕೆಂಪೇಗೌಡ ರವರು. ಬೆಂಗಳೂರು ನಗರದಲ್ಲಿ ಇಂದು 1.25 ಕೋಟಿ ಜನತೆ ತಮ್ಮ ಜೀವನವನ್ನು ಕಟ್ಟಿಕೊಂಡಿದ್ದಾರೆ. ನಾಡಪ್ರಭು ಕೆಂಪೇಗೌಡ ರವರು ಒಂದು ಜಾತಿಗೆ ಸೀಮಿತವಾಗದೆ. ಪ್ರತಿಯೊಂದು ಜನಾಂಗಕ್ಕೂ ಅವರು ಮಾಡುವ ಕೆಲಸದ ಮೇರೆಗೆ ಒಂದೊಂದು ನಗರವನ್ನಾಗಿ ರೂಪಿಸಿದರೆ. ಇದರಿಂದಾಗಿ ಬೆಂಗಳೂರಲ್ಲಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗಿದೆ. ಈ ನಾಡಿಗೆ ಕೆಂಪೇಗೌಡರ ಕೊಡುಗೆ ಅಪಾರ ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ: ಧನಂಜಯ್, ನಾಡಪ್ರಭು ಕೆಂಪೇಗೌಡರ ರವರು ಯಾವುದೇ ಒಂದು ಸಮೂಹಕ್ಕೆ ಯಾವುದೋ ಒಂದು ಜಾತಿಗೆ ಸೀಮಿತವಾದ ವರಲ್ಲ. ಈ ನಾಡಿನಲ್ಲಿ ಎಷ್ಟು ರಾಜರುಗಳು ಆಳ್ವಿಕೆ ನಡೆಸಿದರು ಆದರೆ ಕೆಂಪೇಗೌಡರ ಹೆಸರು ಈಗಲೂ ಇಷ್ಟು ಗಟ್ಟಿಯಾಗಿ ನಿಲ್ಲಲು ಕಾರಣವೆಂದರೆ ಅವರು ಮಾಡಿರುವ ಸಮಾಜಮುಖಿ ಕೆಲಸ ಕಾರ್ಯಗಳು ಹಾಗೂ ಅವರು ಆಳ್ವಿಕೆ ನಡೆಸಿದ ಅಂತ ರೀತಿ ಇಂದ ಮಾತ್ರ ಎಂದು ತಿಳಿಸಿದರು.

ಜಯಂತಿಯಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾದ ಮಂಜುನಾಥ್, ಕರ್ನಾಟಕ ರಾಜ್ಯ ಪಡಿತರ ವಿತರಕರ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ, ಪುರಸಭೆ ಸದಸ್ಯರಾದ ತಿಮ್ಮಪ್ಪ, ಚನ್ನಪ್ಪ, ಪಿಎಸ್ಐ ರವಿಕಿರಣ್, ಪಟ್ಟಣದ ಒಕ್ಕಲಿಗರ ಮುಖಂಡರಾದ ಕೆಂಪೇಗೌಡರು, ಹಾಗೂ ತಾಲೂಕಿನ ಒಕ್ಕಲಿಗ ಮುಖಂಡರುಗಳು ಹಾಜರಿದ್ದರು.

City Today News

(citytoday.media)

9341997936

27.06.2020ರಂದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು

 ಜುಲೈ 5ನೇ ತಾರೀಖಿನಿಂದ ಮುಂದಿನ ಆದೇಶದವರೆಗೆ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್ ಮಾಡಲಾಗುವುದು. (ವಸ್ತುಗಳ ಸಾಗಾಣಿಕೆಗೆ ನಿರ್ಬಂದವಿಲ್ಲ).

 ಜುಲೈ 10ನೇ ತಾರಿಖಿನಿಂದ ಒಂದು ತಿಂಗಳ ಕಾಲ ಈಗಾಗಲೇ ರಜೆಯಿರುವ 2ನೇ ಹಾಗೂ 4ನೇ ಶನಿವಾರದ ಜೊತೆಗೆ ಉಳಿದ ಶನಿವಾರದಂದು ಎಲ್ಲಾ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯಕ್ಕೊಳಪಡುವ ಎಲ್ಲಾ ಕಛೇರಿಗಳಿಗೆ ರಜೆ ಘೋಷಿಸಲು ತೀರ್ಮಾನಿಸಲಾಯಿತು.

 ಪ್ರತಿ ದಿನ ರಾತ್ರಿ 9.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಈಗಾಗಲೇ ಇರುವ ಕಫ್ರ್ಯೂ ಅವಧಿಯ ಬದಲಾಗಿ ರಾತ್ರಿ 8.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಕಫ್ರ್ಯೂ ಅವಧಿಯನ್ನು ಬದಲಾಯಿಸಲು ತೀರ್ಮಾನಿಸಲಾಯಿತು.

 ಬೆಂಗಳೂರಿನಲ್ಲಿರುವ ಬೃಹತ್ ಹೋಲ್‍ಸೇಲ್ ತರಕಾರಿ ಮಾರುಕಟ್ಟೆಗಳಲ್ಲಿ ಆಗುವ ಜನದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ ಹೆಚ್ಚಿನ ಹೋಲ್‍ಸೇಲ್ ತರಕಾರಿ ಮಾರುಕಟ್ಟೆಗಳನ್ನು ತೆರೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚಿಸಲಾಯಿತು.

 ಕೋವಿಡ್-19 ಸೋಂಕಿತ ರೋಗಿಗಳನ್ನು ಶೀಘ್ರವಾಗಿ ಕೋವಿಡ್ ಆಸ್ಪತ್ರೆಗಳಿಗೆ ಸೇರಿಸಲು (ಸೆಂಟ್ರಲೈಜ್ ಬೆಡ್ ಅಲೋಕೇಷನ್ ಸಿಸ್ಟಮ್) ತಂತ್ರಾಂಶದ ಮೂಲಕ ಜಾರಿಗೊಳಿಸಲಾಗುವುದು.

 ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಗಳನ್ನು ಆಸ್ಪತ್ರೆಗೆ ಸಾಗಿಸಲು ಅಂಬ್ಯೂಲೆನ್ಸ್ ಸಂಖ್ಯೆಗಳನ್ನು 250ಕ್ಕೆ ಹೆಚ್ಚಿಸಲು ಮತ್ತು ಕೋವಿಡ್‍ನಿಂದ ಮೃತರಾದ ದೇಹಗಳನ್ನು ಸಾಗಿಸಲು ಪ್ರತ್ಯೇಕ ಅಂಬ್ಯೂಲೆನ್ಸ್ ವ್ಯವಸ್ಥೆ ಮಾಡಲಾಗುವುದು. ಅಂಬ್ಯೂಲೆನ್ಸ್ ಇರುವ ಸ್ಥಳವನ್ನು ಗುರುತಿಸಲು ಮತ್ತು ಅವುಗಳ ಸರಳ ಚಲನವಲನಗಳ ಸಲುವಾಗಿ ಪೊಲೀಸ್ ಕಂಟ್ರೋಲ್ ರೂಂ ವೈರ್‍ಲೆಸ್ ಸೇವೆಯನ್ನು ಬಳಸಿಕೊಳ್ಳಲು ಸೂಚಿಸಲಾಗಿದೆ.

 ಕೋವಿಡ್-19 ರ ನಿಯಂತ್ರಣದಲ್ಲಿ ಕೆಲಸ ಮಾಡುವ ಎಲ್ಲಾ ನೋಡಲ್ ಅಧಿಕಾರಿಗಳ ವಿವರಗಳನ್ನು ಪತ್ರಿಕೆಗಳ ಜಾಹಿರಾತು ಮುಖಾಂತರ ಸಾರ್ವಜನಿಕರಿಗೆ ಪ್ರಚುರಪಡಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

 ಬಿ.ಬಿ.ಎಂ.ಪಿ ಕೇಂದ್ರ ಕಛೇರಿ ಹಾಗೂ ಆಯುಕ್ತರ ಮೇಲೆ ಇರುವ ಕೆಲಸದ ಹೊರೆಯನ್ನು ಕಡಿಮೆಗೊಳಿಸಲು ಬಿ.ಬಿ.ಎಂ.ಪಿ ಯಲ್ಲಿನ 08 ವಲಯಗಳ ಜಂಟಿ ಆಯುಕ್ತರಿಗೆ ಹೆಚ್ಚಿನ ಜವಾಬ್ದಾರಿ ಹಾಗೂ ಕೆಲಸಗಳನ್ನು ನೀಡಲು ಮತ್ತು ಅವರ ಜೊತೆಗೆ ಕೆಲಸ ಮಾಡಲು ಕೆ.ಎ.ಎಸ್ ಅಧಿಕಾರಿಗಳನ್ನು ನಿಯೋಜಿಸಲು ತೀರ್ಮಾನಿಸಲಾಯಿತು.

 ಡಾಕ್ಟರ್‍ಗಳ ಕೊರತೆಯನ್ನು ನೀಗಿಸಲು ಕಾರ್ಮಿಕ ಇಲಾಖೆಯಿಂದ ನೇಮಕವಾಗಿರುವ 180 ಎ.ಎಸ್.ಐ ಡಾಕ್ಟರ್‍ಗಳನ್ನು ಕೋವಿಡ್ ಕರ್ತವ್ಯಕ್ಕೆ ಬಳಸಿಕೊಳ್ಳಲು ಮತ್ತು ಪರೀಕ್ಷಾರ್ತಿ ತಹಶೀಲ್ದಾರ್‍ಗಳನ್ನು ಕೋವಿಡ್ ಆಸ್ಪತ್ರೆಗಳು/ಕೇರ್ ಸೆಂಟರ್‍ಗಳಿಗೆ ನೋಡಲ್ ಅಧಿಕಾರಿಗಳನ್ನಾಗಿ ಹಾಕಲು ಸೂಚಿಸಲಾಯಿತು.

 ಬೆಂಗಳೂರಿನಲ್ಲಿ ಲಭ್ಯವಿರುವ ಕಲ್ಯಾಣ ಮಂಟಪಗಳು, ಹಾಸ್ಟೆಲ್‍ಗಳು ಹಾಗೂ ಇನ್ನಿತರೆ ಸಂಸ್ಥೆಗಳನ್ನು ಕೋವಿಡ್ ಕೇರ್ ಸೆಂಟರ್‍ಗಳಿಗೆ ಮೀಸಲಿಡಲು ಹಾಗೂ ರೈಲ್ವೆ ಇಲಾಖೆಯಿಂದ ಬೆಡ್‍ಗಳ ಕೋಚ್‍ನ್ನು ಪಡೆಯಲು ಅವಶ್ಯ ಕ್ರಮ ಜರುಗಿಸಲು ಸೂಚಿಸಲಾಯಿತು.

 ಕೋವಿಡ್‍ನಿಂದ ಮೃತರಾದ ದೇಹಗಳ ಅಂತ್ಯಕ್ರಿಯೆಯನ್ನು ಜರುಗಿಸಲು ಪ್ರತ್ಯೇಕ ತಂಡಗಳನ್ನು ರಚಿಸುವುದು ಹಾಗೂ ದೇಹಗಳ ಅಂತ್ಯಕ್ರಿಯೆಯ ಸಲುವಾಗಿ ಇನ್ನೂ ಹೆಚ್ಚಿನ ಜಾಗಗಳÀನ್ನು ಗುರುತಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಸೂಚಿಸಲು ತೀರ್ಮಾನಿಸಲಾಯಿತು.

 ಮೆಡಿಕಲ್ ಕಾಲೇಜ್ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‍ಗಳ ಪೈಕಿ ಶೇ.50 ರಷ್ಟನ್ನು ಕೋವಿಡ್ ರೋಗಿಗಳ ಸಲುವಾಗಿ ಮೀಸಲಿಡಲು ಬಿ.ಬಿ.ಎಂ.ಪಿ ಆಯುಕ್ತರಿಗೆ ಸೂಚಿಸಲಾಯಿತು.

 ಆಸ್ಪತ್ರೆಗಳಲ್ಲಿ ಬೆಡ್‍ಗಳು ಪೂರ್ತಿಯಾದ ನಂತರ ರೋಗಿಗಳನ್ನು ಹೋಟೆಲ್‍ಗಳÀ ಕೊಠಡಿಗಳನ್ನು ಚಿಕಿತ್ಸೆಗಾಗಿ ಬಳಸಿಕೊಳ್ಳುವ ಉದ್ದೇಶದಿಂದ ಹೋಟೆಲ್‍ಗಳನ್ನು ಆಸ್ಪತ್ರೆಗಳಿಗೆ ಟೈಯಪ್ ಮಾಡಲು ಸೂಕ್ತ ಕ್ರಮ ಕೈಗೊಳ್ಳಲು ಬಿ.ಬಿ.ಎಂ.ಪಿ ಆಯುಕ್ತರಿಗೆ ಸೂಚಿಸಲಾಯಿತು.

City Today News

(citytoday.media)

9341997936

Highlights of the meeting convened by Chief Minister on 27-6-2020

  • Lockdown would be imposed every Sunday, with effect from July 5, 2020 until further orders. No activities shall be permitted on that day except essential services and supplies.
  • All Government offices shall remain closed on all Saturdays, along with second and fourth Saturday with effect from July 10.
  • The existing timing of night curfew from 9 pm to 5 am in the morning is altered to 8 pm to 5 am with effect from 29 June.
  • Commissioner, BBMP was directed to set up more number of wholesale vegetable markets to avoid crowds in large wholesale vegetable markets for n the city
  • Officers were directed to have centralised bed allocation system to speed up hospitalisation of Covid 19 patients
  • CM directed to enhance the number of ambulances to carry Covid patients to 250 and to arrange seperate ambulances for carrying mortal remains of dead Covid patients. He also directed to use police control room wireless system to identify location and easy movement of ambulances.
  • He directed to publish the details of nodal officers working for Covid Management.
  • It was decided to give additional responsibilities to Joint Commissioners of 8 regions and also to appoint KAS officers to assist them in order to lessen the burden on Commissioner and the central office of BBMP.
  • It was decided to avail services of 180 ESI doctors appointed by Labour department and appoint probationary tahasildars as nodal officers for Covid hospitals and Covid care centers.
  • He directed to take necessary steps to reserve Marriage halls, hostels and other institutions in Bengaluru for Covid care centers and to avail railway coach with beds.

*Bengaluru Urban DC was told to identify more places for the last rites of dead patients. CM also directed to form teams for conducting last rites.

*BBMP Commissioner was directed to notify reservation of 50 per cent of beds in Medical colleges and private hospitals.

  • He was also directed to notify tie up of hotels with hospitals to avoid any shortage of beds for treatment.

City Today News

(citytoday.media)

9341997936