*ಇಂದು ಕಾರ್ಮಿಕ ದಿನ* ; ದುಡಿಯುವ ವರ್ಗಕ್ಕೆ ಶುಭ ಕೋರಿದ ಜಲಸಂಪನ್ಮೂಲ ಸಚಿವರು. ಖಾಸಗೀಕರಣ, ಉದಾರೀಕರಣ ಮತ್ತು ಜಾಗತೀಕರಣದ ಈ ಕಾಲಘಟ್ಟದಲ್ಲಿ ನವಭಾರತದ ನಿರ್ಮಾಣದ ಪ್ರಮುಖ ಶಕ್ತಿ ಈ *ಕಾರ್ಮಿಕ ವರ್ಗ.* ಶ್ರಮಿಕವರ್ಗ ನಮ್ಮ ಸಮಾಜಕ್ಕೆ ಸಲ್ಲಿಸಿರುವ ಸೇವೆ ಅವಿಸ್ಮರಣೀಯ. ನಮ್ಮ ದೇಶದ ಅಭಿವೃದ್ಧಿಗಾಗಿ ಶ್ರಮವಹಿಸಿ ದುಡಿಯುತ್ತಿರುವ ಕಾರ್ಮಿಕ ವರ್ಗಕ್ಕೆ *ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆ* ಯ ಶುಭಾಶಯಗಳು. *ಶ್ರಮಯೇವ ಜಯತೇ* –
*ಶ್ರೀ ರಮೇಶ್ ಜಾರಕಿಹೊಳಿ* ಜಲಸಂಪನ್ಮೂಲ ಸಚಿವರು ಕರ್ನಾಟಕ ಸರ್ಕಾರ.
ಬೆಂಗಳೂರು: ಕೇಂದ್ರ ಸರ್ಕಾರದ ಅನ್ನ ಯೋಜನೆಯಡಿ ಏಪ್ರಿಲ್ ಮತ್ತು ಮೇ ತಿಂಗಳ ಪಡಿತರ ವಿತರಣೆ ನಾಳೆಯಿಂದ ಆರಂಭವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದರು.
ವಿಕಾಸಸೌಧದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ದಾರರಿಗೆ ಪ್ರತಿ ಸದಸ್ಯರಿಗೆ 2 ತಿಂಗಳ 10 ಕೆ.ಜಿ. ಉಚಿತ ಅಕ್ಕಿ, ಪ್ರತಿ ಕುಟುಂಬಕ್ಕೆ 1 ತಿಂಗಳಿನ ಉಚಿತ 1 ಕೆ.ಜಿ.ತೊಗರಿ ಬೇಳೆ ವಿತರಿಸಲಾಗುತ್ತದೆ. 19 ಜಿಲ್ಲೆಗಳಿಗೆ ನಾಳೆಯಿಂದ ಪಡಿತರ ವಿತರಣೆ ಮಾಡಲಾಗುತ್ತದೆ, ಉಳಿದ 12 ಜಿಲ್ಲೆಗಳಿಗೆ ಮೇ 3ರಿಂದ ಪಡಿತರ ವಿತರಿಸಲಾಗುತ್ತದೆ. ಕೇಂದ್ರ ಸರ್ಕಾರ ಏಪ್ರಿಲ್, ಮೇ ಮತ್ತು ಜೂನ್ ತಿಂಗಳ ಪಡಿತರವನ್ನು ನೀಡುತ್ತಿದೆ. ಜೂನ್ ತಿಂಗಳಲ್ಲಿ ಕೇಂದ್ರದ ಐದು ಕೆಜಿ ಅಕ್ಕಿ, 2 ಕೆಜಿ ಬೇಳೆ ಮತ್ತು ರಾಜ್ಯ ಸರ್ಕಾರದ ಐದು ಕೆ.ಜಿ ಅಕ್ಕಿ ಮತ್ತು ಎರಡು ಕೆಜಿ ಗೋಧಿ ವಿತರಿಸಲಾಗುತ್ತದೆ ಎಂದರು.
ಇನ್ನು ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ 1,88,512 ಕುಟುಂಬ ವರ್ಗಕ್ಕೂ ಮೂರು ತಿಂಗಳು ಉಚಿತ 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತದೆ. ಎಪಿಎಲ್ ಕಾರ್ಡ್ ಗೆ ಅರ್ಜಿ ಹಾಕಿದ 61,233 ಫಲಾನುಭವಿಗಳಿಗೂ ಪ್ರತಿ ಕೆಜಿಗೆ ರೂ.15ರಂತೆ 10 ಕೆಜಿ ಅಕ್ಕಿ ವಿತರಿಲಾಗುತ್ತದೆ. ಪಡಿತರ ಪಡೆಯಲು ಬೆರಳಚ್ಚು ಬಯೋಮೆಟ್ರಿಕ್ ಅಥವಾ ಒಟಿಪಿ ದೃಢೀಕರಣ ಕಡ್ಡಾಯ ಎಂದು ತಿಳಿಸಿದರು.
ಪೋರ್ಟೆಬಿಲಿಟಿ ಯೋಜನೆ ಜಾರಿಯಿರುತ್ತದೆ. ಇದರಿಂದ ಯಾವುದೇ ಜಿಲ್ಲೆಯ ಹಾಗೂ ದೇಶದ ಯಾವುದೇ ರಾಜ್ಯಗಳ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಬಹುದಾಗಿದೆ. ಆಹಾರ ದಾನ್ಯ ವಿತರಣಾ ಸಂಧರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ತೂಕದಲ್ಲಿ ಮೋಸ, ಇಲಾಖೆಯ ಪಡಿತರ ಬಿಟ್ಟು ಬೇರೆ ವಸ್ತುಗಳ ಪಡೆಯುವಂತೆ ಒತ್ತಾಯಿಸುವುದು, ಓಟಿಪಿ ಹೆಸರಲ್ಲಿ ಸೇವಾಶುಲ್ಕ ಪಡೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಂತಹ ನ್ಯಾಯಬೆಲೆ ಅಂಗಡಿಗಳನ್ನು ಅಮಾನತ್ತು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ನಿರ್ದೇಶನದಂತೆ ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ 5.5.2020 ರಂದು, ಈಗಾಗಲೇ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಂಡಿರುವ ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಸುತ್ತೋಲೆ ಹೊರಡಿಸಿದೆ. ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜುಮಟ್ಟದಲ್ಲಿಯೇ ನಿರ್ವಹಿಸಲು ಮಾನದಂಡಗಳನ್ನು ಮುಂದೆ ತಿಳಿಸಲಾಗುವುದು ಎಂದೂ ಸಹ ಸುತ್ತೋಲೆ ಸ್ಪಷ್ಟ ಪಡಿಸಿದೆ.
ಖಾಸಗಿ ಕಾಲೇಜುಗಳು ಈ ಸಾಲಿನಲ್ಲಿ ಶುಲ್ಕ ಹೆಚ್ಚಿಸುವ ಹಾಗಿಲ್ಲ
ಖಾಸಗಿ ಪಿಯು ಕಾಲೇಜುಗಳು ಇಂತಹ ಸಾಮಾಜಿಕ ಸಂಕಷ್ಟದ ಸಂದರ್ಭ ದಲ್ಲಿ ಅಸಹಾಯಕ ಪೋಷಕರಿಂದ ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಒತ್ತಾಯಿಸಬಾರದು, ಇಚ್ಛಿಸುವ ಪೋಷಕರಿಂದ ಕಂತುಗಳ ಮೂಲಕ ಸ್ವೀಕರಿಸತಕ್ಕದ್ದು ಹಾಗೂ 2020-21 ನೇ ಈ ಸಾಲಿಗೆ ಯಾವುದೇ ಕಾರಣಕ್ಕೂ ಬೋಧನ ಶುಲ್ಕವನ್ನು ಹೆಚ್ಚಿಸಬಾರದೆಂದು ಇಲಾಖೆಯು ನಿರ್ದೇಶನ ನೀಡಿದೆ.
ಒಂದು ವೇಳೆ ಈ ಬಗ್ಗೆ ದೂರುಗಳು ಬಂದಲ್ಲಿ, ಕಾಲೇಜುಗಳ ಮೇಲೆ ನಿರ್ದಾಕ್ಷಿಣ್ಯವಾದ ಕ್ರಮಕ್ಕೆ ಮುಂದಾಗಲಾಗುವುದೆಂದು ಪದವಿಪೂರ್ವ ಶಿಕ್ಷಣ ನಿರ್ದೇಶಕರು ತಮ್ಮ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಶಾಸಕ ಎಂ. ಚಂದ್ರಪ್ಪ ಅವರು ವೈಯಕ್ತಿಕವಾಗಿ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ 50 ಲಕ್ಷ ರೂ.ಗಳ ಚೆಕ್ ನ್ನು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಚಿವರುಗಳಾದ ಶ್ರೀರಾಮುಲು ಹಾಗೂ ಜಗದೀಶ್ ಶೆಟ್ಟರ್ ಉಪಸ್ಥಿತರಿದ್ದರು.
ಭಾರತೀಯ ಚಲನಚಿತ್ರ ರಂಗದ ದಿಗ್ಗಜರಾಗಿದ್ದ ರಿಷಿ ಕಪೂರ್ ಅವರ ನಿಧನದ ಸುದ್ದಿ ಕೇಳಿ ನನ್ನ ಮನಸ್ಸು ಭಾರವಾಗಿದೆ. ಅವರು ನಟಿಸಿದ್ದ ಹಲವಾರು ಚಲನಚಿತ್ರಗಳನ್ನು ನಾನು ನೋಡಿದ್ದೇನೆ.ಅವರ ಮನೋಜ್ಞ ಅಭಿನಯದ ಮೇರಾ ನಾಮ್ ಜೋಕರ್ ಚಿತ್ರವನ್ನು ಹಲವು ಬಾರಿ ನಾನು ನೋಡಿದ್ದೇನೆ. ಭಾರತೀಯ ಸಿನಿಮಾದ ದಂತ ಕಥೆ ರಿಷಿ ಕಪೂರ್ ನಿಧನದಿಂದ ಭಾರತೀಯ ಚಲನಚಿತ್ರ ರಂಗವು ಅಮೋಘ ಅಸಾಧಾರಣ ಪ್ರತಿಭೆಯನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಚಿರ ಶಾಂತಿ ಸಿಗಲಿ. ಓಂ ಶಾಂತಿ:
You must be logged in to post a comment.