ಶ್ರೀ ಎಂ.ವಿ.ರಾಜಶೇಖರನ್ ಅವರು ಸರಳತೆ, ಸಜ್ಜನಿಕೆ ಹಾಗೂ ಉತ್ತಮ ಪ್ರಬುದ್ಧತೆಯ ರಾಜಕಾರಣಿಯಾಗಿದ್ದು, ಗ್ರಾಮೀಣ ಆರ್ಥಿಕ ಸಲಹೆಗಾರರಾಗಿದ್ದರು.
ಲೋಕಸಭೆ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಅತ್ಯುತ್ತಮ ಸಂಸದೀಯ ಪಟುವಾಗಿ ಸೇವೆ ಸಲ್ಲಿಸಿದ್ದರು.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗದವರಿಗೆ, ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಸನ್ಮಾನ್ಯ ಸಭಾಧ್ಯಕ್ಷರು ಪ್ರಾರ್ಥಿಸಿರುವುದಾಗಿ ತಿಳಿಸಿರುತ್ತಾರೆ.
Bangalore April 2020: Are you always pressed for time? Do you like to multi-task in the kitchen? If so, you are in for a treat. India’s number one kitchen appliances brand, TTK Prestige has launched the PIC 31.0 innovative induction cooktop, a first in India with its a pre-set pressure cooking menu that does all the cooking for you.
This revolutionary feature means that you can cook various dishes with an ‘automatic whistle counter’ that can sense your pressure cooker’s activity and automatically switches to the ‘keep warm’ mode. The most exciting part of this cooktop is the auto pressure cooking mode, which is a smart pre-set feature that lets you cook various dishes automatically by just pressing a Auto P C mode menu button on the control panel. For instance, Cooking rice has never been this easy. All you need to do is select the rice function from the Auto PC Menu options and the cook-top will start functioning. After the cooker gives one whistle, the two dots on the display will start flashing, the timer function will get activated and start decreasing. At the end of the time, the cooktop will go to auto keep warm mode, to ensure the rice stays hot.
Prepare to be spoilt for choice with a diverse menu ranging from rice, sambhar, gravy, rajma, channa, pongal, khichdi, chicken and any other meat on demand. This is a must-have kitchen appliance for the busy home cook who is burning the candle at both ends and takes away the hassle of having to count the number of whistles. The intelligent pre-set feature allows you adjust the setting in seconds, thus saving you time. The design ensures the elimination of magnetic energy and hence you can enjoy a healthy meal without any magnetic or radiation hazards.
The cooktop retails for INR 3995 and is available for purchase at Prestige Xclusive stores and leading dealer outlets across the country. The PIC 31.0 come with a one year guarantee.
ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಎಂ.ವಿ ರಾಜಶೇಖರನ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
ಎಂ.ವಿ. ರಾಜಶೇಖರನ್ ಅವರು ಕಾಂಗ್ರೆಸ್ ಪಕ್ಷವನ್ನು ಕಟ್ಟಿದ ನಾಯಕರಲ್ಲಿ ಒಬ್ಬರು. ಪಕ್ಷಕ್ಕೆ ಅವರ ಕೊಡುಗೆ ಅಪಾರ. ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ ಹಾಗೂ ರಾಜ್ಯ ಸಭೆಯ ಸದಸ್ಯರಾಗಿದ್ದ ಅವರ ಪಕ್ಷನಿಷ್ಠೆ ಆದರ್ಶನೀಯ.
ಅವರು ಪಕ್ಷದ ಶಿಸ್ತಿನ ಸಿಪಾಯಿ. ಜೀವನದಲ್ಲೂ ಬಹಳ ಶಿಸ್ತು ಬದ್ಧರಾಗಿದ್ದರು. ಪ್ರತಿಯೊಬ್ಬರ ಜತೆಗೂ ಸ್ನೇಹದಿಂದ ಬೆರೆಯುತ್ತಿದ್ದರು. ಅಜಾತಶತ್ರುವಾಗಿ ಬದುಕಿದರು ಎಂದು ಶಿವಕುಮಾರ್ ಅವರು ಸ್ಭರಿಸಿದ್ದಾರೆ.
ಅವರ ಬದುಕು ನಮಗೆ ಆದರ್ಶ. ಅವರು ಮಾರ್ಗದರ್ಶಕರಾಗಿ ನಮ್ಮನ್ನು ಮುನ್ನಡೆಸಿದ್ದರು. ಇಂದು ಅವರನ್ನು ಕಳೆದುಕೊಂಡಿದ್ದೇವೆ. ಇದು ನಮಗೆ ತುಂಬಲಾರದ ನಷ್ಟ.
ಕೆಲ ದಿನಗಳ ಹಿಂದಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದೆ. ಅವರು ಇಂದು ನಮ್ಮನ್ನು ಅಗಲಿದ್ದಾರೆ ಎಂಬ ಸುದ್ದಿ ಕೇಳಿ ಮನಸಿಗೆ ಬಹಳ ಬೇಸರವಾಗಿದೆ. ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಬೆಂಬಲಿಗರಿಗೆ ಆ ಭಗವಂತ ನೀಡಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ತುಮಕೂರು: ಮಾನ್ಯ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶಾಸಕರಾದ ಜ್ಯೋತಿಗಣೇಶ್, ಜಿಲ್ಲಾಧಿಕಾರಿಗಳು, APMC ನಿರ್ದೇಶಕರು. ಜಿಲ್ಲಾ ಹಿರಿಯ ಅಧಿಕಾರಿಗಳ ಜೊತೆ ತುಮಕೂರು ಎಪಿಎಂಸಿಯ ಅಂತರಸನಹಳ್ಳಿ ತರಕಾರಿ ಮತ್ತು ಹೂವು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ ಸೋಂಕು ನಿವಾರಕ ಟನಲ್ ಅನ್ನು ಸ್ವತಃ ಸಚಿವರೇ ಪ್ರವೇಶಿಸುವ ಮೂಲಕ ಜನಜಾಗೃತಿ ಮೂಡಿಸಿದರು.
ವರ್ತಕರು ಹಾಗೂ ರೈತರ ಜೊತೆ ಕೆಲಕಾಲ ಸಮಸ್ಯೆಗಳನ್ನು ಆಲಿಸಿದ ಮಾನ್ಯ ಸಚಿವರು, ಮಾರುಕಟ್ಟೆಗೆ ತರಕಾರಿ ಸೇರಿದಂತೆ ಹಣ್ಣುಗಳನ್ನು ಸಾಗಾಟ ಮಾಡುವಾಗ ಪೊಲೀಸರಿಂದ ತೊಂದರೆಯಾಗುತ್ತಿದೆಯೇ ಎಂದು ವಿಚಾರಿಸಿದರು. ಈ ವೇಳೆ ಸನ್ಮಾನ ಮಾಡಲು ವರ್ತಕರು ಮುಂದಾದರಾದರೂ ನಯವಾಗಿಯೇ ನಿರಾಕರಿಸಿದ ಮಾನ್ಯ ಸಚಿವರು, ಇಂಥ ಸಂದರ್ಭದಲ್ಲಿ ಇವುಗಳು ಬೇಡ. ಮೊದಲು ಈ ಸಂಕಷ್ಟಗಳಿಂದ ಪಾರಾದರೆ ಸಾಕು ಎಂದು ತಿಳಿಸಿದರು.
ಬಳಿಕ ಎಪಿಎಂಸಿ ಪ್ರಾಂಗಣದಲ್ಲಿ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಚಿವರು, ರಸ್ತೆ ಹದಗೆಟ್ಟಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ತ್ವರಿತವಾಗಿ ಸರಿಪಡಿಸುವಂತೆ ಸೂಚಿಸಿದರು.
ಅಲ್ಲಿಂದ ನೇರವಾಗಿ ಪ್ರತ್ಯೇಕವಾಗಿ ಇರಿಸಲಾದ ಹೂವಿನ ಮಾರುಕಟ್ಟೆ ಪ್ರವೇಶಿಸಿದ ಸಚಿವರು, ವ್ಯಾಪಾರ ಹಾಗೂ ವ್ಯವಸ್ಥೆ ಬಗ್ಗೆ ವಿಚಾರಿಸಿದರು. ಹೂವು ಮಾರಾಟಕ್ಕೆ ಅವಕಾಶವಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಈಗ ಮಾಡಿರುವ ವ್ಯವಸ್ಥೆ ಬಗ್ಗೆ ವರ್ತಕರಲ್ಲೇ ನೇರವಾಗಿ ಪ್ರಶ್ನಿಸಿ, ಅಭಿಪ್ರಾಯ ಸ್ವೀಕರಿಸಿದರು.
ಸಮಸ್ಯೆಗಳ ತ್ವರಿತ ಇತ್ಯರ್ಥಕ್ಕೆ ಸರ್ಕಾರ ಬದ್ಧ
ಎಪಿಎಂಸಿಗೆ ರೈತರು ನೇರವಾಗಿ ಮಾರಾಟ ಮಾಡುವ ಉದ್ದೇಶದಿಂದಲೇ ಎಲ್ಲೂ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳೂ ಸೂಚಿಸಿದ್ದಾರೆ. ನಾನೂ ಸಹ ಎಲ್ಲ ಎಪಿಎಂಸಿಗಳಿಗೂ ಭೇಟಿ ನೀಡಿ, ಖುದ್ದಾಗಿ ಅಹವಾಲು ಆಲಿಸುತ್ತಿದ್ದೇನೆ. ರೈತರ ಹಾಗೂ ವರ್ತಕರ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಸರ್ಕಾರ ಸಿದ್ಧವಿದೆ. ಆ ನಿಟ್ಟಿನಲ್ಲಿ ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಎಲ್ಲೆಡೆ ಟನಲ್ ಗೆ ಸೂಚನೆ ಎಪಿಎಂಸಿಗಳಲ್ಲಿ ರೈತರಿಗೆ ಎಲ್ಲ ಅನುಕೂಲ ಮಾಡಿಕೊಡಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸ್ಯಾನಿಟೈಸೇಶನ್, ಮಾಸ್ಕ್ , ಸೋಂಕು ನಿವಾರಕ ಟನಲ್ ವ್ಯವಸ್ಥೆ ಮಾಡಿಕೊಡುವಂತೆ ಸೂಚಿಸಿದ್ದೇನೆ. ಎಲ್ಲ ಕಡೆಗಳಲ್ಲೂ ಇದು ಜಾರಿಯಲ್ಲಿದೆ. ಅಲ್ಲದೆ ಎಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮಾನ್ಯ ಸಚಿವರು ತಿಳಿಸಿದರು.
ಮೋಸ ಮಾಡಿದರೆ ಕ್ರಮ ಹೆಚ್ಚಿನ ಬೆಲೆ ಮಾರಾಟ ಆಗುವ ಬಗ್ಗೆ ಪ್ರತಿಕ್ರಿಯಿಸಿ, ಇಂಥ ಪ್ರಕರಣಗಳು ಕಂಡುಬಂದರೆ ಮುಲಾಜಿಲ್ಲದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ತೂಕದಲ್ಲಿ ಮೋಸ, ಪಡಿತರ ನೀಡದೇ ಇರುವಂಥವರನ್ನು ಸರ್ಕಾರ ಸಹಿಸದು ಎಂದು ಸಚಿವರು ತಿಳಿಸಿದರು.
ಅಂತಾರಾಜ್ಯ ಮಾರಾಟಕ್ಕೆ ಸಮಸ್ಯೆಯಾಗುತ್ತಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಥ ಸಮಸ್ಯೆಯನ್ನು ಈಗಾಗಲೇ ಬಗೆಹರಿಸಲಾಗಿದೆ. ತುಮಕೂರು ಗಡಿಯಿಂದ ಆಂಧ್ರ ಪೊಲೀಸರು ಈಗಾಗಲೇ ರೈತರಿಗೆ ಹೋಗಲು ಅನುವು ಮಾಡಿಕೊಡುತ್ತಿದ್ದಾರೆ. ಸಮಸ್ಯೆ ಇದ್ದರೆ ಮಾತನಾಡಿ ಬಗೆಹರಿಸುವೆ ಎಂದು ಸಚಿವರು ತಿಳಿಸಿದರು.
ಮೈಸೂರಲ್ಲಿ ನಿಯಂತ್ರಣಕ್ಕೆ ಕೊರೋನಾ ಮೈಸೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿದೆ. ಅಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುತ್ತಿದ್ದಾರೆ. ಶೀಘ್ರ ಜಿಲ್ಲೆ ಕೊರೋನಾ ಮುಕ್ತವಾಗಲಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
You must be logged in to post a comment.