ಕಾನ್ಸ್‌ಟೇಬಲ್ (ಸಿ.ಎ.ಆರ್/ಡಿ.ಎ.ಆರ್) (ಪುರುಷ) (ಕಲ್ಯಾಣ ಕರ್ನಾಟಕ) ಹುದ್ದೆಗಳ ನೇಮಕಾತಿಗಾಗಿ ಸುಮಾರು 20,560 ಅಭ್ಯರ್ಥಿಗಳಿಗೆ ಬೆಂಗಳೂರು ನಗರದಲ್ಲಿನ 41 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ಮಾಹಿತಿಯನ್ನು ಇಲಾಖಾ ವೆಬ್‌ಸೈಟ್ https://ksp.karnataka.gov.in/ or
https://ksp-recruitment.in ಬಿಡುಗಡೆ ಮಾಡಲಾಗಿರುತ್ತದೆ. ಅರ್ಹ ಅಭ್ಯರ್ಥಿಗಳು ಕರೆಪತ್ರವನ್ನು ಮೇಲ್ಕಂಡ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಈ ಮೂಲಕ ತಿಳಿಯಪಡಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.
ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ರೌಡಿ ಆಸಾಮಿಯಾದ ಶಿವರಾಜ @ ಕುಳ್ಳ ಶಿವ ಈತನು ಹಲ್ಲೆ, ಕೊಲೆಯತ್ನ, ಕೊಲೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆತನ ವಿರುದ್ದ ಬ್ಯಾಡರಹಳ್ಳಿ, ತಾವರೆಕೆರೆ, ಮಾದನಾಯಕನಹಳ್ಳಿ, ಕುಂಬಳಗೂಡು ಪೊಲೀಸ್ ಠಾಣೆಗಳಲ್ಲಿ ಒಟ್ಟು 10 ಪ್ರಕರಣಗಳು ದಾಖಲಾಗಿರುತ್ತವೆ. ಸದರಿ ಆಸಾಮಿಯ ಪದೇ ಪದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿದ್ದು, ಆತನ ರೌಡಿ ಚಟುವಟಿಕೆಗಳನ್ನು ನಿಯಂತ್ರಿಸುವ ಸಲುವಾಗಿ ಕರ್ನಾಟಕ ಪೊಲೀಸ್ ಅಧಿನಿಯಮದ ಪ್ರಕಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿ.ಬಿ.ಎಂ.ಪಿ ವ್ಯಾಪ್ತಿಯ ಪ್ರದೇಶವನ್ನು ಪ್ರವೇಶಿಸದಂತೆ ಗಡಿಪಾರು ಆದೇಶ ಹೊರಡಿಸಲು ಕೋರಿ ಮಾನ್ಯ ಜಂಟಿ ಪೊಲೀಸ್ ಆಯುಕ್ತರು (ಅಪರಾಧ) ಬೆಂಗಳೂರು ನಗರ ರವರ ಸೂಚನೆಯಂತೆ ಸಿಸಿಬಿ ಸಂಘಟಿತ ಅಪರಾಧ ದಳ (ಪಶ್ಚಿಮ) ಅಧಿಕಾರಿಗಳು ಮಾನ್ಯ ಉಪ ಪೊಲೀಸ್ ಆಯುಕ್ತರು, ಪಶ್ಚಿಮ ವಿಭಾಗ ರವರಿಗೆ ವರದಿಯನ್ನು ಸಲ್ಲಿಸಿದ್ದು, ಸದರಿ ರೌಡಿ ಆಸಾಮಿಯ ವಿರುದ್ಧ ದಿನಾಂಕ 18.08.2023 ರಿಂದ 17.08.2024 ರ ವರೆಗೆ 01 ವರ್ಷದ ಅವಧಿಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ವ್ಯಾಪ್ತಿಯ ಪ್ರದೇಶವನ್ನು ಪ್ರವೇಶಿಸದಂತೆ ತುಮಕೂರು ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿರುತ್ತಾರೆ.
ಸಂಬಂಧಿಕರ ಮದುವೆಗೆಂದು ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದವರ ಸೂಟ್‌ಕೇಸ್‌ನಲ್ಲಿದ್ದ ಚಿನ್ನಾಭರಣ ಮತ್ತು ವಜ್ರದ ಒಡವೆಗಳು ಕಳ್ಳತನವಾಗಿರುವ ಬಗ್ಗೆ, ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಪ್ರಾರಂಭಿಸಿದ ಯಲಹಂಕ ಉಪನಗರ ಪೊಲೀಸರು ಪಿರಾದುದಾರರು ಹೋಟೆಲ್‌ನಿಂದ ಮದುವೆಗೆ ಓಡಾಡಲು ಬಾಡಿಗೆಗೆ ಪಡೆದಿದ್ದ ಕಾರ್ ಚಾಲಕನನ್ನು ಬಂಧಿಸಿ, ಕಳುವಾಗಿದ್ದ ಸುಮಾರು 30,00,000/- ರೂ ಮೌಲ್ಯದ 485 ಗ್ರಾಂ ಚಿನ್ನಾಭರಣ ಹಾಗೂ 17.5 ಕ್ಯಾರೆಟ್ ತೂಕದ ವಜ್ರದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಪಿರಾದುದಾರರು ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಅವರು ತಂಗಿದ್ದ ಹೋಟೆಲ್ ರೂಂ ಖಾಲಿ ಮಾಡಿಕೊಂಡು ಹೊರಡುವ ಸಂದರ್ಭದಲ್ಲಿ, ಒಡವೆಗಳಿದ್ದ ಸೂಟ್ ಕೇಸ್‌ನ್ನು ಕಾರಿನಲ್ಲಿರಿಸಿ, ರೂಂ ಕೀ ಹಿಂದಿರುಗಿಸಿ ಬರಲು ತೆರಳಿದ್ದಾಗ ಕಾರ್ ಚಾಲಕ ಒಡವೆಗಳನ್ನು ಸೂಟ್‌ಕೇಸ್‌ನಿಂದ ಕಳವು ಮಾಡಿರುವುದಾಗಿ ತನಿಖೆಯಿಂದ ತಿಳಿದುಬಂದಿರುತ್ತದೆ. ತನಿಖೆ ಮುಂದುವರೆದಿರುತ್ತದೆ.
ಈಶಾನ್ಯ ವಿಭಾಗದ ಮಾನ್ಯ ಉಪ ಪೊಲೀಸ್ ಆಯುಕ್ತರಾದ ಶ್ರೀ ಬಿ.ಎಮ್. ಲಕ್ಷ್ಮೀ ಪ್ರಸಾದ್, ರವರ ಮಾರ್ಗದರ್ಶನದಲ್ಲಿ, ಯಲಹಂಕ ರವರ ಉಪ ನೇತೃತ್ವದಲ್ಲಿ ವಿಭಾಗದ ಸಹಾಯಕ ಪೊಲೀಸ್ ಯಲಹಂಕ ಉಪನಗರ ಪೊಲೀಸ್ ಆಯುಕ್ತರಾದ ಶ್ರೀ ಇನ್ಸ್‌ಪೆಕ್ಟರ್ ಶ್ರೀ ಗೋವಿಂದರಾಜು.ಬಿ., ಹಾಗೂ ಸಿಬ್ಬಂದಿಯವರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಶಂಶಿಸಿರುತ್ತಾರೆ.
ಲೋಕಾಯುಕ್ತ ಡಿವೈಎಸ್ಪಿ ಎಂದು ಸರ್ಕಾರಿ ನೌಕರರನ್ನು ಹೆದರಿಸಿ, ಹಣ ವಸೂಅ ಮಾಡುತ್ತಿದ್ದ ಆರೋಪಿಯ ಬಂಧನ.
ವಿಶಾಲ್ ಪಾಟೀಲ್ ಎಂಬುವವನು ತಾನು ಕರ್ನಾಟಕ ಲೋಕಾಯುಕ್ತ ಡಿ.ವೈ.ಎಸ್.ಪಿ ಎಂದು ಸರ್ಕಾರಿ ನೌಕರರುಗಳಿಗೆ ಕರೆ ಮಾಡಿ, ನಿಮ್ಮ ವಿರುದ್ಧ ಆದಾಯಕ್ಕೂ ಮೀರಿದ ಆಸ್ತಿಗಳಿಗೆ ಸಂಬಂಧಪಟ್ಟ ಮಾಹಿತಿಗಳುಳ್ಳ ಕೇಸಿನ ಕಡತ ನನ್ನ ಬಳಿ ಇದೆ ಎಂದು ಬೆದರಿಕೆ ಹಾಕಿ, ಕೇಸನ್ನು ಮುಕ್ತಾಯ ಮಾಡಲು ಹಣ ನೀಡಬೇಕು. ಇಲ್ಲದಿದ್ದರೆ, ನಿಮ್ಮ ವಿರುದ್ಧ ಕರ್ನಾಟಕ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳುತ್ತೇನೆಂದು ಸುಳ್ಳು ಹೇಳಿ ಹಣಕ್ಕೆ ಒತ್ತಾಯ ಮಾಡುತ್ತಿದ್ದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಕಾರ್ಯೊನ್ಯುಖರಾದ ವಿಧಾನಸೌಧ ಪೊಲೀಸ್ ಠಾಣಿ ಮೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿ, ಆರೋಪಿಯನ್ನು ವಿಚಾರಣಿಗೆ ಒಳಪಡಿಸಿದಾಗ ಆತನು ಸರ್ಕಾರಿ ನೌಕರರ ಬಳಿ ಹೋಗಿ ಹೆದರಿಸಿ, ಹಣವನ್ನು ಪಡೆದುಕೊಂಡು ಬರುತ್ತಿದ್ದಾಗಿ, ತನಿಖಾ ಸಮಯದಲ್ಲಿ ಕಂಡು ಬಂದಿರುತ್ತದೆ. ಲೋಕಾಯುಕ್ತ ಡಿ.ವೈ.ಎಸ್.ಪಿ ಎಂದು ಕರೆ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯು ತಲೆ ಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿರುತ್ತದೆ.
ಈ ಯಶಸ್ವಿ ಕಾರ್ಯಾಚರಣೆಯನ್ನು ಶ್ರೀ. ಶ್ರೀನಿವಾನಗೌಡ ಆರ್, ಉವ ಮೊಲೀಸ್ ಆಯುಕ್ತರು, ಕೇಂದ್ರ ವಿಭಾಗ, ಬೆಂಗಳೂರು ನಗರ ರವರ ಮಾರ್ಗದರ್ಶನದಲ್ಲಿ, ಶ್ರೀ. ಸಿ.ಬಾಲಕೃಷ್ಣ, ಸಹಾಯಕ ಮೊಅಸ್ ಆಯುಕ್ತರು, ಕಬ್ಬನ್ ಪಾರ್ಕ್ ಉಪ ವಿಭಾಗ ರವರ ನೇತೃತ್ವದಲ್ಲಿ ಎಸ್.ಪಿ. ಕುಮಾರಸ್ವಾಮಿ, ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿರವರ ತಂಡ ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.
ಮನೆಗಳ ಮುಂಭಾಗ ಬೀಗ ಹಾಕಿ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ, ಸುಮಾರು ರೂ.7,50,000/- ಮೌಲ್ಯದ 12 ದ್ವಿಚಕ್ರ ವಾಹನ ವಶ.
ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳು ದಾಖಲಾದ ಕಾರಣ, ತನಿಖೆಯನ್ನು ಕೈಗೊಂಡ ಬನಶಂಕರಿ ಪೊಲೀಸರು, ಒಬ್ಬ ಕುಖ್ಯಾತ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಅರೋಪಿಯನ್ನು ದಸ್ತಗಿರಿ ಮಾಡಿ, ಆತನು ನೀಡಿದ ಮಾಹಿತಿ ಮೇರೆಗೆ ಸುಮಾರು ರೂ.7,50,000/- ಮೌಲ್ಯದ ವಿವಿಧ ಮಾದರಿಯ ಒಟ್ಟು 12 ದ್ವಿಚಕ್ರ ವಾಹನಗಳನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಸದರಿ ಆರೋಪಿಯ ಪತ್ತೆಯಿಂದ ಬನಶಂಕರಿ ಪೊಲೀಸ್ ಠಾಣೆಯ 05, ಸುದ್ದಗುಂಟೆ ಪಾಳ್ಯ, ಹನುಮಂತನಗರ ಪೊಲೀಸ್ ಠಾಣೆಗಳ ತಲಾ 02, ಹಾಗೂ ಕುಮಾರಸ್ವಾಮಿ ಲೇಔಟ್, ಬಸವನಗುಡಿ, ತಲಘಟ್ಟಪುರ ಪೊಲೀಸ್ ಠಾಣೆಯ ತಲಾ 01 ಪ್ರಕರಣ ಸೇರಿ ಒಟ್ಟು 12 ಪ್ರಕರಣಗಳು ಪತ್ತೆಯಾಗಿರುತ್ತವೆ. ಸದರಿ ಆರೋಪಿಯ ಮೇಲೆ ಈಗಾಗಲೇ ಬೆಂಗಳೂರು ನಗರದ ಜೆ.ಪಿ.ನಗರ, ಕೋಣನಕುಂಟೆ, ಕುಮಾರಸ್ವಾಮಿ ಲೇಔಟ್ ಮತ್ತು ಇತರೆ ಪೊಲೀಸ್ ಠಾಣೆಗಳಲ್ಲಿ ಸುಮಾರು 15 ಕ್ಕೂ ಹೆಚ್ಚು ಪ್ರಕರಣಗಳು ಇರುತ್ತವೆ.
ಬೆಂಗಳೂರು ನಗರ, ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಪಿ.ಕೃಷ್ಣಕಾಂತ್, ಮತ್ತು ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ. ವಿ.ನಾರಾಯಣಸ್ವಾಮಿ ರವರ ಮಾರ್ಗದರ್ಶನದಲ್ಲಿ ಬನಶಂಕರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಗಿರೀಶ್ ಸಿ ನಾಯ್ಕ ರವರ ನೇತೃತ್ವದ ಸಿಬ್ಬಂದಿಯವರ ತಂಡ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.
You must be logged in to post a comment.