ಪ್ರತಿನಿತ್ಯ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಪಾದುಕೆ ಗಳನ್ನು ಪೂಜಿಸುತ್ತಿರುವ ಪರಮ ಪೂಜ್ಯ ಶ್ರೀ 108 ಶ್ರೀ ಶ್ರೀಸುಬುಧೇಂದ್ರತೀರ್ಥ ಶ್ರೀಪಾದರು!

ಪ್ರತಿನಿತ್ಯ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಪಾದುಕೆ ಗಳನ್ನು ಪೂಜಿಸುತ್ತಿರುವ ಪರಮ ಪೂಜ್ಯ ಶ್ರೀ 108 ಶ್ರೀ ಶ್ರೀಸುಬುಧೇಂದ್ರತೀರ್ಥ ಶ್ರೀಪಾದರು!
ಇತ್ತೀಚೆಗೆ ಕಲ್ಯಾಣಿ ನಗರ ವಾದ ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮ ಪೂಜ್ಯ ಶ್ರೀ 108 ಶ್ರೀ ಶ್ರೀಸುಬುಧೇಂದ್ರತೀರ್ಥ ಶ್ರೀಪಾದರು,ಶ್ರೀಮನ್ ಮೂಲ ರಾಮಚಂದ್ರದೇವರ ಸಂಸ್ಥಾನ ಪೂಜೆಯನ್ನು ನೆರವೇರಿಸಿ ನಂತರ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಪಾದುಕೆಗೆ ಪೂಜೆಯನ್ನು ಮಾಡಿ ನಂತರ ರಾಯರ ಬೃಂದಾವನಕ್ಕೆ ಮಹಾಮಂಗಳಾರತಿಯನ್ನು ನೆರವೇರಿಸಿದರು .ಈ ಸಂದರ್ಭದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದಿಂದ್ರಾಚಾರ್ಯರು, ಪುರೋಹಿತರಾದ ನಂದಕಿಶೋರಾಚಾರ್ಯರು ಹಾಗೂ ಭಕ್ತರು ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು

City Today News – 9341997936