ಸನ್ಮಾನ್ಯ ಶ್ರೀ. ಕೆ.ಎಸ್.ಈಶ್ವರಪ್ಪರವರನ್ನು ಉಪಮುಖ್ಯಮಂತ್ರಿ ಮಾಡುವಂತೆ ಒತ್ತಾಯ

ಸನ್ಮಾನ್ಯ ಶ್ರೀ. ಕೆ.ಎಸ್.ಈಶ್ವರಪ್ಪನವರು , ಕರ್ನಾಟಕ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸಿ , ಮೂರು ದಶಕಗಳ ಕಾಲ ತನ್ನ ಪಕ್ಷಕ್ಕಾಗಿ ತನ್ನನ್ನು ತೊಡಗಿಸಿಕೊಂಡು , ಜನಸಂಘದಲ್ಲಿ ಗುರುತಿಸಿಕೊಂಡಿದ್ದರು . 75-77ರ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಬಂಧನಕ್ಕೊಳಗಾಗಿದ್ದರು . 1982 ರಲ್ಲಿ ಶಿವಮೊಗ್ಗ ನಗರ ಘಟಕದ ಅಧ್ಯಕ್ಷರಾಗಿ , ಬಿಜೆಪಿ , ಪಕ್ಷದ ಬೆಳವಣಿಗೆಯಲ್ಲಿ ತೊಡಗಿಸಿಕೊಂಡವರು . 1989 ರಲ್ಲಿ ಮೊಟ್ಟ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿ , ಅಂದಿನಿಂದ ನಿರಂತರ ಪರಿಶ್ರಮದಿಂದ ದಕ್ಷಿಣಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ 2008 ರಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಡಿಯೂರಪ್ಪನವರಷ್ಟೇ ಶ್ರಮವನ್ನು ಈಶ್ವರಪ್ಪನವರು ಪಟ್ಟಿದ್ದಾರೆ . ಇಂದಿಗೂ ಸಹ ತನ್ನ ಪಕ್ಷವನ್ನು ತಾಯಿಯ ಸ್ಥಾನದಲ್ಲಿಟ್ಟು ಗೌರವಿಸುತ್ತಿದ್ದಾರೆ ಪಕ್ಷಸಿದ್ದಾಂತಗಳನ್ನು ಪಾಲನೆ ಮಾಡುತ್ತಿದ್ದಾರೆ . ರಾಜ್ಯದಲ್ಲಿರುವ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ 55 % ರಷ್ಟಿರುವ ಹಿಂದುಳಿದ ವರ್ಗಗಳ ನಾಯಕರಾಗಿ , ಆ ವರ್ಗಗಳ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ .

ಯಾವತ್ತಿಗೂ ಸಹ ತನ್ನ ಪಕ್ಷನಿಷ್ಠೆಗೆ ಮೋಸ ಮಾಡದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ . ಯಡಿಯೂರಪ್ಪನವರು ಬಿಜೆಪಿ ಪಕ್ಷವನ್ನು ಬಿಟ್ಟಾಗಳು ಸಹ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಮುನ್ನೆಡೆಸಿದ್ದರವರು . 2008-2013ರ ಅವಧಿಯಲ್ಲಿ ಬಿ.ಎಸ್.ಯಡಿಯೂರಪ್ಪನವರ , ಸದಾನಂದಗೌಡರು , ಜಗದೀಶಶೆಟ್ಟರ್‌ ರವರು ಮುಖ್ಯಮಂತ್ರಿಗಳಾಗಿದ್ದರು , 2019 ರಲ್ಲಿ ಮತ್ತೊಮ್ಮೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾರೆ .

ರಾಜ್ಯದಲ್ಲಿ ಮತ್ತೆ ಲಿಂಗಾಯುತ ಸಮುದಾಯದ ಬಸವರಾಜ ಬೊಮ್ಮಾಯಿಯವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ . ಆದ್ದರಿಂದ ಮುಖ್ಯಮಂತ್ರಿ ಸ್ಥಾನದಿಂದ ಶ್ರೀ ಕೆ.ಎಸ್.ಈಶ್ವರಪ್ಪನವರಿಗೆ ರಾಜ್ಯ ಉಪಮುಖ್ಯಮಂತ್ರಿ ಸ್ಥಾನವನ್ನು ಕೊಡುವುದರ ಮೂಲಕ ಹಿಂದುಳಿದ ವರ್ಗ ಹಾಗೂ ರಾಜ್ಯದ ದೊಡ್ಡ ಸಮುದಾಯದಲ್ಲಿ ಒಂದಾದ ಕುರುಬ ಸಮಾಜಕ್ಕೆ ನ್ಯಾಯ ಕಲ್ಪಿಸಿಕೊಡಬೇಕಾಗಿ ಈ ಪತ್ರಿಕಾಗೋಷ್ಠಿಯ ಮೂಲಕ ರಾಜ್ಯ ಬಿಜೆಪಿ ಹಾಗೂ ಕೇಂದ್ರ ಬಿಜೆಪಿ ವರಿಷ್ಠರಿಗೆ ಮನವಿ ಮಾಡುತ್ತಿದ್ದೇವೆ .

-ವೀರೇಶ್ ಉಂಡೋಡಿ

ರಾಜ್ಯಾಧ್ಯಕ್ಷರು

ಮಂಜುನಾಥ್.ಎಂ

ರಾಜ್ಯ ಪ್ರಧಾನ ಕಾರ್ಯದರ್ಶಿ

City Today News
9341997936