ಸಿಎಂಆರ್ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಸರ್ಕಾರಿ ಜಮೀನು ಭೂ ಕಬಳಿಕೆ ಮಾಡಿ ಸದರಿ ಜಮೀನಿನಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ

ಸಿಎಂಆರ್ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಸರ್ಕಾರಿ ಜಮೀನು ಭೂ ಕಬಳಿಕೆ ಮಾಡಿ ಸದರಿ ಜಮೀನಿನಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ಮಾಡಿ ಕೋಟ್ಯಾತರ ರೂಪಾಯಿ ಕೊಳ್ಳೆ ಹೊಡೆದು ಸರ್ಕಾರಕ್ಕೆ ವಂಚಿಸುತ್ತಿರುವ ಕುರಿತು ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹ . ರಾಷ್ಟ್ರೀಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ತು ( ರಿ ) ಕಳೆದ 4 ವರ್ಷಗಳಿಂದ ದೇಶದ 20 ಕ್ಕೂ ಹೆಚ್ಚು ರಾಜ್ಯಗಳಲ್ಲಿ ತಮ್ಮ ಶಾಖೆಗಳನ್ನು ತೆರೆದು ಭ್ರಷ್ಟಾಚಾರ , ಅಪರಾಧ ತಡೆಯುವಲ್ಲಿ ಜಾಗೃತಿ ಮೂಡಿಸುವುದು ಮತ್ತು ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಹಾಗೂ ಮಾನವ ಹಕ್ಕುಗಳ ಬಗ್ಗೆ ಸಂದೇಶ ಸಾರಿ ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ನೊಂದವರಿಗೆ ನ್ಯಾಯ ದೊರಕಿಸಿ ಕೊಡುವಲ್ಲಿ ಸೇವೆ ಸಲ್ಲಿಸುತ್ತಿದೆ . ಬೆಂಗಳೂರು ಉತ್ತರ ಯಲಹಂಕ ತಾಲ್ಲೂಕು ಜಾಲ ಹೋಬಳಿ ಜಾಗಲಟ್ಟಿ ಗ್ರಾಮಕ್ಕೆ ಸೇರಿದ ಸರ್ವೇ ನಂ 102 / ಪಿ 7 400 ಎಕರೆ ಸರ್ಕಾರಿ ಜಮೀನು ಇದ್ದು ಈ ಜಮೀನಿನ ಪಕ್ಕದಲ್ಲಿ ಪ್ರತಿಷ್ಟಿತ ಸಿಎಂಆರ್‌ ವಿಶ್ವವಿದ್ಯಾಲಯದ ಆಡಳಿತ ಪ್ರದೇಶವು ಇರುತ್ತದೆ ಆದರ ಸಿಎಂಆರ್ ವಿಶ್ವವಿದ್ಯಾಲಯ ಆಡಳಿತ ಮಂಡಳಿಯವರು ಅವರಿಗೆ ಸೇರಿದ ಜಮೀನಿಗೆ ಹೊಂದುಕೊಂಡಿರುವ ಮೇಲಿನ ಸರ್ವೇ ನಂ 102 / ಪಿ 7 ರ 4.00 ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿಕೊಂಡು ಅಲ್ಲಿ ಕಾವಲುಗಾರರನ್ನು ಇಟ್ಟು ಪೂರಾ ಸರ್ಕಾರಿ ಜಮೀನಿಗೆ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿದ್ದಾರೆ ಆದರೆ ಸದರಿ ಸರ್ಕಾರಿ ಜಮೀನಿನಲ್ಲಿ ಕರಿ ಗ್ರಾನೈಟ್ ಕ್ವಾರಿಗಳಿದ್ದು ಇದು ಸುಮಾರು ಕೋಟ್ಯಾಂತರ ರೂಪಾಯಿ ಬೆಲೆ ಬಾಳುವಂತದ್ದಾಗಿರುತ್ತದೆ . ಸಿಎಂಆರ್ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಕಳೆದ ಮೂರು ವರ್ಷಗಳಿಂದ ಈ ಜಮೀನನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆಯನ್ನು ನಡೆಸುತ್ತಿದ್ದು ತಗೆದಿರುವ ಕಲ್ಲುಗಳನ್ನು ಸ್ಥಳಿಯರ ಸಹಾಯ ಹಾಗೂ ಬೆಂಬಲದಿಂದ ಬೆರೆಡೆಗೆ ಸಾಗಾಟ ಮಾಡುತ್ತಿದ್ದಾರೆ .
ಈ ಅಕ್ರಮ ಕಲ್ಲು ಗಣಿಗಾರಿಕೆ ಕುರಿತು ಸ್ಥಳಿಯರು ಪಂಚಾಯತಿ ಹಾಗೂ ಇತರೆ ಸಂಬಂಧಿಸಿದ ಇಲಾಖೆಗಳಿಗೆ ಮೌಖಿಕವಾಗಿ ತಿಳಿಸಿದ್ದರೂ ಇದುವರೆಗೂ ಯಾವುದೇ ರೀತಿಯಲ್ಲಿ ಕ್ರಮ ಕೈಗೊಂಡಿರುವುದಿಲ್ಲ ವಿಷಯವಾಗಿ ದಿನಾಂಕ : 13-06-2022 ರಂದು ನಮ್ಮ ಸಂಸ್ಥೆಯಿಂದ ಸ್ಥಳಕ್ಕೆ ಹೋಗಿ ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ಕೇಳಲಾಗಿ ಕೆಲವರು ನಮ್ಮ ಮೇಲೆ ಗಲಾಟೆ ಮಾಡಿದ ಸಂದರ್ಭದಲ್ಲಿ ಸ್ಥಳಿಯ ಕಂದಾಯ ಇಲಾಖೆ , ಪೋಲಿಸ್ ಇಲಾಖೆ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯವರು ಸ್ಥಳಕ್ಕೆ ಆಗಿಮಿಸಿ ಅಕ್ರಮ ಕಲ್ಲು ಗಣಿಗಾರಿಕೆಗೆ ಬಳಸಲಾಗುತ್ತಿದ್ದ ಯಂತ್ರಗಳು ಹಾಗೂ ಸಕರಣೆಗಳನ್ನು ಜಪ್ತಿ ಮಾಡಿದ್ದಾರೆ ಈ ಕುರಿತು ನಮ್ಮ ಸಂಸ್ಥೆಯಿಂದ ಬಾಗಲೂರು ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು ಮಾನ್ಯ ಜಿಲ್ಲಾಧಿಕಾರಿಗಳು ಬೆಂಗಳೂರು , ಉಪ ತಹಶೀಲ್ದಾರ್ ನಾಡ ಕಛೇರಿ , ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಯಲಹಂಕ ತಾಲ್ಲೂಕು ರವರಿಗೂ ಸೂಕ್ತ ಕ್ರಮಕ್ಕಾಗಿ ಮನವಿ ಸಲ್ಲಿಸಿರುತ್ತವೆ . • ಆದ್ದರಿಂದ ಸರ್ಕಾರಿ ಜಮೀನನ್ನು ಭೂ – ಕಬಳಿಕೆ ಮಾಡಿ ಅಕ್ರಮ ಕಲ್ಲು ಗಣಿಗಾರಿಕೆ ಮಾಡುತ್ತಿರುವ ಸಿಎಂಆರ್ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಹಾಗೂ ಈ ಅಕ್ರಮದಲ್ಲಿ ಭಾಗಿಯಾಗಿರುವವರ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಸರ್ಕಾರವನ್ನ ರಾಷ್ಟ್ರೀಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ತು ಒತ್ತಾಯಿಸುತ್ತಿದೆ ಎಂದು ಝಾನ್ ಸಾಮುವೇಲ್ ಕಿಮ್.ಜೆ ಯವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.9341997936

City Today News

9341997936