ಬೆಂಗಳೂರು, ಜ.28: ಡ್ರಗ್ ಆಕ್ಷನ್ ಫೋರಂ ಕರ್ನಾಟಕ (DAF-K) ವತಿಯಿಂದ ಬುಧವಾರ ನಗರದ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಸಂಘಟನೆಯ ಅಧ್ಯಕ್ಷರಾದ ಡಾ. ಗೋಪಾಲ್ ದಾಬಡೆ (ಮೊ. 7829604700), ಸ್ವಾತಿ, ವೈಶಾಲಿ, ಅಕ್ಷಯ್ ಸೇರಿದಂತೆ ಪ್ರಮುಖ ಸದಸ್ಯರು ಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಗೂ ಉತ್ತಮ ಗುಣಮಟ್ಟದ ಔಷಧಿಗಳು ನಿರಂತರವಾಗಿ ಲಭ್ಯವಾಗಬೇಕು, ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆಯನ್ನು ತಕ್ಷಣ ಜಾರಿಗೊಳಿಸಬೇಕು, ಖಾಸಗಿ ಆಸ್ಪತ್ರೆಗಳ ಅತಿರೇಕ ಶುಲ್ಕವನ್ನು ನಿಯಂತ್ರಿಸಬೇಕು ಹಾಗೂ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ (PPP) ಸಂಪೂರ್ಣ ವಿರಾಮ ನೀಡಬೇಕು ಎಂಬ ನಾಲ್ಕು ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರ್ಕಾರ ತಕ್ಷಣ ಈಡೇರಿಸಬೇಕೆಂದು ಒತ್ತಾಯಿಸಿದರು.ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆಬ್ರವರಿ 2 ರಿಂದ 17 ರವರೆಗೆ ರಾಜ್ಯವ್ಯಾಪಿ “ಆರೋಗ್ಯ ಹಕ್ಕಿನ ಜಾಥಾ” ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಜಾಥಾ ಫೆಬ್ರವರಿ 2 ರಂದು ಬೀದರ್ ಜಿಲ್ಲೆಯಿಂದ ಪ್ರಾರಂಭವಾಗಿ, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಾಗುತ್ತಾ, ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಅಂತಿಮವಾಗಿ ಫೆಬ್ರವರಿ 17 ಅಥವಾ 18 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಅಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆಬ್ರವರಿ 2 ರಿಂದ 17 ರವರೆಗೆ ರಾಜ್ಯವ್ಯಾಪಿ “ಆರೋಗ್ಯ ಹಕ್ಕಿನ ಜಾಥಾ” ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಜಾಥಾ ಫೆಬ್ರವರಿ 2 ರಂದು ಬೀದರ್ ಜಿಲ್ಲೆಯಿಂದ ಪ್ರಾರಂಭವಾಗಿ, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಾಗುತ್ತಾ, ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಅಂತಿಮವಾಗಿ ಫೆಬ್ರವರಿ 17 ಅಥವಾ 18 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಅಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಈ ಜಾಥಾ ಕಾರ್ಯಕ್ರಮದಲ್ಲಿ ಸುಮಾರು 1,000 ರಿಂದ 1,500 ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಸಂಘಟಕರು ಮಾಹಿತಿ ನೀಡಿದರು. ರಾಜ್ಯದಲ್ಲಿ ಆರೋಗ್ಯವನ್ನು ಮೂಲಭೂತ ಹಕ್ಕಾಗಿ ಘೋಷಿಸುವ ನಿಟ್ಟಿನಲ್ಲಿ ಈ ಹೋರಾಟ ಮಹತ್ವದ ಹೆಜ್ಜೆಯಾಗಲಿದೆ ಎಂದು ಅವರು ಹೇಳಿದರು.
City Today News 9341997936

You must be logged in to post a comment.