ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬರ್ತಲೋಮಿಯೊ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಒತ್ತಾಯ.

ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕ್ರೈಸ್ತ ಧರ್ಮದವರಾದ ಬರ್ತಲೋಮಿಯೊ ಅವರಿಗೆ ಟಿಕೆಟ್ ನೀಡಬೇಕೆಂಬುದು ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಒತ್ತಾಯಿಸುತ್ತಿದೆ.
ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಕ್ರೈಸ್ತರು ಕಾಂಗ್ರೆಸ್ ಪರವಾಗಿ ಎಲ್ಲಾ ಚುನಾವಣೆಗಳಲ್ಲೂ ಮತ ನೀಡಿದ್ದಾರೆ. ಅಲ್ಪ ಸಂಖ್ಯಾತರಾದ ಕ್ರೈಸ್ತರು ಅಂದಿನಿಂದಲೂ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿದ್ದಾರೆಂದು ವಿಷಾದದಿಂದ ನಮ್ಮ ಸಂಘಟನೆ ಹೇಳಬಯಸುತ್ತಿದೆ. ಆದರೂ ಶಾಂತಿ ಪ್ರಿಯರಾದ ನಮ್ಮ ಧರ್ಮಿಯರು ಯಾವುದೇ ರೀತಿಯ ಒತ್ತಡವನ್ನು ಕಾಂಗ್ರೆಸ್ ಪಕ್ಷದ ಮೇಲಾಗಲಿ ಅಥವಾ ರಾಜಕಾರಣಿಗಳ ಮೇಲಾಗಲಿ ಹೇರಿಲ್ಲ. ಶಾಂತಿಯುತವಾಗಿ ಎಲ್ಲ ಚುನಾವಣೆಗಳಲ್ಲೂ ಕ್ರೈಸ್ತ ಧರ್ಮಿಯರಿಗೆ ಸೂಕ್ತ ಸಂಖ್ಯೆಯ ಟಿಕೆಟ್ ನೀಡುವಂತೆ ಮನವಿ ಮಾಡುತ್ತಲೇ ಬಂದಿದ್ದಾರೆ. ಆದಾಗ್ಯೂ ಕಾಂಗ್ರೆಸ್ ಪಕ್ಷ ಸೂಕ್ತ ಅವಕಾಶಗಳನ್ನು ನೀಡಿಲ್ಲ ಎಂಬುದು ದುರಾದೃಷ್ಟಕರ ಸಂಗತಿ.

ಬೆಂಗಳೂರು ಕೇಂದ್ರ ಲೋಕ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕ್ರೈಸ್ತ ಧರ್ಮಿಯರು ಬಹು ಸಂಖ್ಯಾತರಿದ್ದಾರೆ. ಅಷ್ಟೇ ಅಲ್ಲ ಮುಸ್ಲಿಂರಷ್ಟೆ ಸಂಖ್ಯೆಯ ಮತದಾರರಿದ್ದಾರೆ. ಈ ಕ್ಷೇತ್ರದಿಂದ ಕ್ರೈಸ್ತ ಧರ್ಮಿಯರಿಗೆ ಲೋಕ ಸಭಾ ಟಿಕೆಟ್ ನೀಡಿದರೆ ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಕ್ರೈಸ್ತರು ನೀಡಿರುವ ನಿರಂತರವಾದ ಬೆಂಬಲ ಮತ್ತು ರಾಜ್ಯಕ್ಕೆ ಕ್ರೈಸ್ತ ಮಿಷನರಿಗಳು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕ್ರೈಸ್ತ ಧರ್ಮದವರಾದ ಬರ್ತಲೋಮಿಯೊ ಅವರಿಗೆ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ವರ್ಧಿಸುವಂತೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂಬುದು ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಒತ್ತಾಯವಾಗಿದೆ.
ಬರ್ತಲೋಮಿಯೊ ಅವರು 30 ವರ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾರಾಗಿ ದುಡಿದಿರುತ್ತಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಪಕ್ಷ ನಿಷ್ಠೆ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ ಟಿಕೆಟ್
ನೀಡಲು ರಪಾಯಲ್ ರಾಜ್. ಅಧ್ಯಕ್ಷರು ಮತ್ತು ಜಾನ್ ಬ್ರಿಟೋ, ಉಪಾಧ್ಯಕ್ಷರು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಒತ್ತಾಯಿಸಿದರು.
City Today News 9341997936

You must be logged in to post a comment.