ಕೋವಿಡ್ ಹಿನ್ನೆಲೆಯಲ್ಲಿ ಅನಾಥವಾದ ಮಕ್ಕಳ ಪೋಷಣೆಗೆ ಸರ್ಕಾರ ಸಿದ್ದ – ಬಾಧಿತ ಮಕ್ಕಳ ವಸತಿಗಾಗಿ ರೆಸಿಡೆನ್ಸಿಯಲ್ ಶಾಲೆ ಮೀಸಲು – ಸಚಿವೆ ಶಶಿಕಲಾ ಜೊಲ್ಲೆ ಮಹತ್ವದ ಘೋಷಣೆ

ಬೆಂಗಳೂರು ಮೇ.18 – ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಪಾಲಕರ ಪೋಷಣೆಯಿಂದ ಅನಾಥರಾದ ಮಕ್ಕಳ ಪುನರ್ವಸತಿ ಕಲ್ಪಿಸಲು ಸರ್ಕಾರ ಸಿದ್ದವಿದ್ದು, 18 ವರ್ಷದೊಳಗಿನ ಮಕ್ಕಳ ಕ್ವಾರೆಂಟೈನ್ ಗಾಗು ಒಂದು ವಸತಿಶಾಲೆ ನಿರ್ಧರಿಸಲಾಗಿದ್ದು, ಅಂಥಹ ಮಕ್ಕಳ ಯಾವುದೇ ಕಾರಣಕ್ಕೂ ಭಯ ಪಡುವ ಅವಶ್ಯಕತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅಭಯ ನೀಡಿದ್ದಾರೆ.
ಕೋವಿಡ್ ಕಾರಣದಿಂದ ಅನಾಥರಾದ ಮಕ್ಕಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದ ಅವರು, ಕೋವಿಡ್ ನಿಂದ ಬಾಧಿತರಾದ ಮಕ್ಕಳನ್ನು ಗುರುತಿಸಲು ಹಾಗೂ ಪುನರ್ವಸತಿಗೆ ಸರ್ಕಾರ 1098 ಎಂಬ ಸಹಾಯವಾಣಿ ತಂದಿದ್ದು, ಹಿರಿಯ ಐಎಎಸ್ ಅಧಿಕಾರಿ ಮೋಹನ್ ರಾಜ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದ್ದು, ಇಂಥ ಮಕ್ಕಳಿಗೆ ಕೌಟುಂಬಿಕ ವಾತಾವರಣ ಒದಗಿಸುವುದು ಸಚಿವೆಯಾಗಿ ನನ್ನ ಹಾಗೂ ನಮ್ಮ ಇಲಾಖೆ ಹಾಗೂ ನಮ್ಮ ಸರ್ಕಾರದ ಕರ್ತವ್ಯ ಎಂದರು.
- ಮಕ್ಕಳು ಪಾಲಕರ ಪೋಷಣೆಯಿಂದ ವಂಚಿರಾಗುವ ಸಂಧರ್ಭಗಳು
1.ತಂದೆ – ತಾಯಿ ಕೋವಿಡ್ ನಿಂದ ಮೃತರಾದರೆ
2.ತಂದೆ-ತಾಯಿ ಇಬ್ಬರು ಆಸ್ಪತ್ರೆಗೆ ದಾಖಲಾದರೆ
- ಕೋವಿಡ್ ನಿಂದ ಒಬ್ಬರು ಮೃತರಾಗಿ ಇನ್ನೊಬ್ಬರು ಆಸ್ಪತ್ರೆಗೆ ದಾಖಲಾದರೆ
- ಒಬ್ಬರು ಮೃತರಾಗಿ ಇನ್ನೊಬ್ಬರು ಬೇರೆ ಪ್ರದೇಶದಲ್ಲಿ ವಾಸವಿದ್ದರೆ.
ಈ ಮೇಲಿನ ಕಾರಣಗಳಿಂದ ಮಕ್ಕಳು ಅನಾಥರಾದಾಗ ಅವರಿಗೆ ನಾವಿದ್ದೇವೆ ಎಂಬ ಭಾವನೆಯನ್ನು ಮೂಡಿಸಲು ಇಲಾಖೆ ಸಜ್ಜಾಗಿದೆ.
- ಇನ್ನು ಸಚಿವೆ ಶಶಿಕಲಾ ಜೊಲ್ಲೆಯವರ ವಿಶೇಷ ಮುತುವರ್ಜಿ ಮೇರೆಗೆ ಕೋವಿಡ್ ಬಾಧಿತ ಅನಾಥ ಮಕ್ಕಳಿಗಾಗಿಯೇ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ.
- 6 ವರ್ಷದೊಳಗಿನ ಮಕ್ಕಳ ಆರೈಕೆಗೆ ವಿಶೇಷ ಕ್ವಾರೆಂಟೈನ್ ಸೌಲಭ್ಯ, ವಿಶೇಷ ದತ್ತು ಸಂಸ್ಥೆಗಳನ್ನು ಗೊತ್ತುಪಡಿಸುವುದು.
- 7 ರಿಂದ 18 ವರ್ಷದೊಳಗಿನ ಮಕ್ಕಳ ಆರೈಕೆಗೆ ವಿಶೇಷ ಕ್ವಾರೆಂಟೈನ್ ಸೌಲಭ್ಯ ಹಾಗೂ ಪಿಟ್ ಫೆಸಿಲಿಟಿಸ್ ಒದಗಿಸುವುದು
- 18 ವರ್ಷದವರೆಗಿನ ಮಕ್ಕಳ ಕ್ವಾರೆಂಟೈನ್ ಗಾಗಿ ರೆಸಿಡೆನ್ಸಿಯಲ್ ಮೀಸಲಿಡಲು ತೀರ್ಮಾನ
- ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ವಿಶೇಷ ಯೋಜನೆ
- ಯಾವುದೇ ಲಕ್ಷಣಗಳಿಲ್ಲದ ಕೋವಿಡ್ ಪೀಡಿತ ಮಕ್ಕಳಿಗೆ ವಿಶೇಷ ಪಿಡಿಯಾಟ್ರಿಕ್ ಕೋವಿಡ್ ಕೇರ್ ಸೆಂಟರ್ (CCC) ಗಳಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ 30 ಜಿಲ್ಲೆಗಳಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ
2.ಲಕ್ಷಣವುಳ್ಳ ಕೋವಿಡ್ ಸೋಂಕಿತ ಮಕ್ಕಳಿಗೆ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಪಿಡಿಯಾಟ್ರಿಕ್ ಕೋವಿಡ್ ಕೇರ್ ಸೆಂಟರ್ ನಲ್ಲಿ ವಿಶೇಷ ಆರೈಕೆ. ಇಲಾಖೆಯಿಂದ ವಿಶೇಷ ಆರೈಕೆದಾರರ ನೇಮಕ
- ಕೋವಿಡ್ ಸಂಧರ್ಭದಲ್ಲಿ ನಮ್ಮ ಇಲಾಖೆಯಿಂದ ಕೈಗೊಂಡ ಕ್ರಮಗಳು
- ಅಂಗನವಾಡಿ ಫಲಾನುಭವಿಗಳಿಗೆ ಮನೆಮನೆಗೆ ತೆರಳಿ ವಿಶೇಷ ಪೌಷ್ಟಿಕ ಆಹಾರ ವಿತರಣೆ
2.ಅಂಗನವಾಡಿ ಮಕ್ಕಳು, ಗರ್ಭಿಣಿ, ಬಾಣಂತಿಯರ ಆರೋಗ್ಯದ ಮೇಲೆ ವಿಶೇಷ ನಿಗಾ - ಕೋವಿಡ್ ಸೋಂಕಿನಿಂದ ಮರಣಹೊಂದಿದ 12 ಅಂಗನವಾಡಿ ಕಾರ್ಯಕರ್ತೆಯರಿಗೆ 30 ಲಕ್ಷ ರೂಗಳ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ.
- 3ನೇ ಅಲೆಯು ಚಿಕ್ಕ ಮಕ್ಕಳಲ್ಲಿಯೇ ಹೆಚ್ಚಾಗಿ ಸೋಂಕು ಕಂಡುಬರುತ್ತದೆ ಎಂದು ತಜ್ಞರು ಎಚ್ಚರಿಸಿದ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮ ಇಲಾಖೆ ಇದಕ್ಕೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುತ್ತಿದೆ.
City Today News
9341997936

You must be logged in to post a comment.