
ಜನವರಿ 25 ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು ನೂತನ ಕೋಟೆ , ಚಾಮರಾಜ ಪೇಟೆ, ಬೆಂಗಳೂರು ಇಲ್ಲಿ, ಮಧ್ಯಾಹ್ನ 1:30 ಕ್ಕೆ ಕುವೆಂಪು ಅನಿಕೇತನ ಪ್ರಶಸ್ತಿ ಪುರಸ್ಕೃತ ಕವಿ- ಸಾಮಾಜಿಕ ಹೋರಾಟಗಾರ ಡಾ.ವಡ್ಡಗೆರೆ ನಾಗರಾಜಯ್ಯ ಅವರಿಗೆ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ವತಿಯಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಮಾರಂಭದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಖ್ಯಾತ ಕವಿ ಮತ್ತು ಸಂಸ್ಕೃತಿ ಚಿಂತಕ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಕವಯಿತ್ರಿ ಡಾ.ಹೆಚ್.ಎಲ್ ಪುಷ್ಪ ಹಾಗೂ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಎ.ಎಚ್. ನಿಂಗೇಗೌಡ ಭಾಗವಹಿಸಲಿದ್ದಾರೆ. ಸರ್ಕಾರಿ ಪದವಿಪೂರ್ವ ಕಾಲೇಜು ನೂತನಕೋಟೆ ಪ್ರಾಂಶುಪಾಲರಾದ ಎಂ. ನಾರಾಯಣಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಕನ್ನಡ ಸಲಹಾ ಮಂಡಳಿ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರಾದ ಹೊ.ನ. ನೀಲಕಂಠಗೌಡ ಅವರು ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ.
City Today News 9341997936

You must be logged in to post a comment.