ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿವಿಶೇಷ ಪೂಜೆ, ಅನ್ನದಾನ ಸೇವೆ ಹಾಗೂ ವೀಣಾ ವಾದನ

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಅಕ್ಟೋಬರ್ 31, ಗುರುವಾರ ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ ಅನ್ನದಾನ ಸೇವೆ ಕಾರ್ಯಕ್ರಮಗಳು ನಡೆದವು. ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ತೊಟ್ಟಿಲು ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕು|| ಅಹಿಕಾ ನಾಗದೀಪ್ ಮತ್ತು ಸಂಗಡಿಗರಿಂದ ರಾಯರಿಗೆ ಪ್ರಿಯವಾದ “ವೀಣಾ ವಾದನ” ಸೇವೆಗಳು ಜರುಗಿದವು ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.

City Today News 9341997936

ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿವಿಶೇಷ ಪೂಜೆ,  ಹಾಗೂ ತಂದೆ-ಮಗನ ಜುಗಲ್ ಬಂದಿ ಸ್ಯಾಕ್ಸೋಫೋನ್ ವಾದನ

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಆಗಸ್ಟ್ 23, ಶುಕ್ರವಾರ ಬೆಳಗ್ಗೆ ಶ್ರೀ  ಸುಜ್ಞಾನೇಂದ್ರತೀರ್ಥ ಆರಾಧನೆ ಪ್ರಯುಕ್ತ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ  ಕಾರ್ಯಕ್ರಮ ನಡೆದವು. ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ತೊಟ್ಟಿಲು ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದ್ವಾನ್ ಜನಾರ್ಧನ್ ಮತ್ತು ಅವರ ಮಗ ಮಾಸ್ಟರ್ ಎಲ್.ಎನ್. ದತ್ತಾ (ತಂದೆ -ಮಗ) ಇವರಿಂದ ಸ್ಯಾಕ್ಸೋಫೋನ್ ವಾದನ ಜುಗಲ್ ಬಂದಿ ಜರುಗಿದವು ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.

City Today News 9341997936

“ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಜಯತೀರ್ಥರ ಆರಾಧನಾ ಮಹೋತ್ಸವ ವಿಶೇಷ  ಪೂಜೆ” ಹಾಗೂ ನರ್ತನ ಸೇವೆ

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಜುಲೈ 25, ಗುರುವಾರ ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ ಅನ್ನದಾನ ಸೇವೆ ಕಾರ್ಯಕ್ರಮಗಳು ನಡೆದವು. ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ತೊಟ್ಟಿಲು ಪೂಜೆ ಹಾಗೂ ಶ್ರೀ ಜಯತೀರ್ಥರ ಮಧ್ಯಾರಾಧನೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ವಾನ್ ಶ್ರೀ ಮಾಲತೇಶ್ ಅವರ ನಿರ್ದೇಶನದಲ್ಲಿ  ನಾಟ್ಯ ಶಂಕರ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ  ನರ್ತನ ಸೇವೆ ಜರುಗಿದವು ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.

City Today News 9341997936

ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹುಣ್ಣಿಮೆ ಪ್ರಯುಕ್ತ “ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆ”

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಹೋಳಿ ಹುಣ್ಣಿಮೆ ಪ್ರಯುಕ್ತ ಮಾರ್ಚ್ 25, ಸೋಮವಾರ ಬೆಳಗ್ಗೆ 9:30ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿ ವ್ರತ ಪೂಜೆಯನ್ನು “ಲೋಕ-ಕಲ್ಯಾಣ”ಕ್ಕಾಗಿ “ಸಂಕಲ್ಪಿಸಿ” ಭಕ್ತರ ಸಂಕಲ್ಪದೊಂದಿಗೆ ಮಹಾ ಮಂಗಳಾರತಿಯೊಂದಿಗೆ ವಿಶೇಷ ಪೂಜೆಯನ್ನು ಪುರೋಹಿತರಾದ ಶ್ರೀ ನಂದಕಿಶೋರಾಚಾರ್ಯರು ನೆರವೇರಿಸಿದರು, ತದನಂತರ ಭಕ್ತರಿಗೆ ಪ್ರಸಾದ ವಿತರಣೆಯು ನೆರವೇರಿತು. ಈ ಸಂದರ್ಭದಲ್ಲಿ ಧರ್ಮಾಧಿಕಾರಿಗಳಾದ ಶ್ರೀ ಕೃಷ್ಣ ಗುಂಡಾಚಾರ್ಯರು, ಮತ್ತು ಶ್ರೀ ಪ್ರಮೋದಾಚಾರ್,ಶ್ರೀ ಕಟ್ಟಿ ರಾಘವೇಂದ್ರ ಆಚಾರ್ ಹಾಗೂ ಶ್ರೀಮಠದ ಸಿಬ್ಬಂದಿಗಳು, ನೂರಾರು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಭಾಗವಹಿಸಿ, ಪ್ರಸಾದವನ್ನು ಸ್ವೀಕರಿಸಿ, ಶ್ರೀ ಸತ್ಯನಾರಾಯಣ ಸ್ವಾಮಿಯ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಕೃಪೆಗೆ ಪಾತ್ರರಾದರು ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದರು.

City Today News 9341997936

ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಶೇಷ ಉತ್ಸವ – ಶ್ರೀಮತಿ ಗೀತಾ ಭತ್ತದ ವೃಂದದಿಂದ “ದಾಸವಾಣಿ ಸೇವೆ’

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ , ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮಾರ್ಚ್ 14, ಗುರುವಾರ ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾ ಮಂಗಳಾರತಿ ಹಾಗೂ ‘ಅನ್ನದಾನ” ಸೇವೆಯ ಕಾರ್ಯಕ್ರಮಗಳು ನಡೆದವು. ಸಂಜೆಯ ಕಾರ್ಯಕ್ರಮದಲ್ಲಿ ಗಜವಾಹನೋತ್ಸವ, ತೊಟ್ಟಿಲು ಪೂಜೆ ಹಾಗೂ ವಿಶೇಷವಾಗಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ  ಶ್ರೀಮತಿ ಗೀತಾ ಭತ್ತದ್ ಮತ್ತು “ಗಾನ ಸಿದ್ದಗಂಗಾ ಸಂಗೀತ” ವಿದ್ಯಾಲಯದ ವಿದ್ಯಾರ್ಥಿಗಳು ‘ದಾಸವಾಣಿ’ಕಾರ್ಯಕ್ರಮವನ್ನು ಅತ್ಯದ್ಭುತವಾಗಿ ಯಶಸ್ವಿಯಾಗಿ ನಡೆಸಿಕೊಟ್ಟರು, ನೆರೆದಿದ್ದ ಭಕ್ತ ಸಮೂಹ  ಸಂಗೀತಾಸಕ್ತರು “ದಾಸವಾಣಿ” ಮತ್ತು ಭಕ್ತಿಯ ಸಂಗೀತವನ್ನು ಸವಿದರು ಎಂದು ಶ್ರೀ ನಂದಕಿಶೋರಾಚಾರ್ಯರು ತಿಳಿಸಿದರು , ಈ ಸಂದರ್ಭದಲ್ಲಿ ಶ್ರೀ ಮಠದ ವ್ಯವಸ್ಥಾಪಕರಾದ ಆರ್, ಕೆ ವಾದಿಂದ್ರಾಚಾರ್ಯರು ಮತ್ತು ಕಿಶೋರಾಚಾರ್ಯರು “ದಾಸವಾಣಿ”ವೃಂದದವರಿಗೆ ಶ್ರೀ ರಾಘವೇಂದ್ರ ಸ್ವಾಮಿಗಳವರ  ಭಾವಚಿತ್ರವನ್ನು ನೀಡಿ ಗುರುಗಳ ಫಲ ಮಂತ್ರಾಕ್ಷತೆಯೊಂದಿಗೆ ಆಶೀರ್ವದಿಸಿದರು, ಸಹಸ್ರಾರು ಭಕ್ತರು ರಾಯರ ಸೇವೆಯಲ್ಲಿ ಭಾಗವಹಿಸಿ “ಅನ್ನಸಂತರ್ಪಣೆ” ಪ್ರಸಾದವನ್ನು ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು,

City Today News 9341997936