ಪತ್ರಕರ್ತ ಹಾಗೂ ಸಾಹಿತಿ ಜಾಣಗೆರೆ ವೆಂಕಟರಾಮಯ್ಯನವರ ‘ನುಡಿಗೋಲು’ ಆಪೂರ್ವ ಸಾಧಕರ ನುಡಿ ಸಂಕಥನ ಇದೇ ನವಂಬರ್ 11ರಂದು ನಗರದ ಶೇಷಾದ್ರಿಪುರಂ ಕಾಲೇಜು ಸಭಾಂಗಣದಲ್ಲಿ ಲೋಕಾರ್ಪಣೆಗೊಳ್ಳಲಿದೆ.
ಬೆಳಿಗ್ಗೆ 11 ಗಂಟೆಗೆ ಹಿರಿಯ ಸಂಸ್ಕೃತಿ ಚಿಂತಕರಾದ ಡಾ. ಕೆ. ಮರುಳಸಿದ್ದಪ್ಪನವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಗಾಂಧೀ ಸ್ಮಾರಕ ನಿಧಿ ಅಧ್ಯಕ್ಷರಾದ ಡಾ. ವೂಡೇ ಪಿ. ಕೃಷ್ಣ ಅವರು ಕೃತಿ ಬಿಡುಗಡೆ ಮಾಡಲಿದ್ದಾರೆ. ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಹಿ.ಚಿ. ಬೋರಲಿಂಗಯ್ಯನವರು ಅಧ್ಯಕ್ಷತೆ ವಹಿಸಲಿದ್ದು, ಕೃತಿ ಕುರಿತು ಕವಿ-ಚಿಂತಕರಾದ ಡಾ. ಬಂಜಗೆರೆ ಜಯಪ್ರಕಾಶ್ ಅವರು ಮಾತಾಡಲಿದ್ದಾರೆ. ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ. ಎಚ್.ಎಲ್. ಪುಷ್ಪ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ‘ಪ್ರಜಾವಾಣಿ’ ದಿನಪತ್ರಿಕೆಯ ಕಾರ್ಯ ನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ ಅವರು ಕೃತಿಯ ಮೊದಲ ಪ್ರತಿ ಸ್ವೀಕರಿಸಲಿದ್ದಾರೆ.

ಈ ಸಮಾರಂಭದಲ್ಲಿ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಾಧೀಶರಾದ ಜಸ್ಟೀಸ್ ವಿ. ಗೋಪಾಲಗೌಡ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಶಿಕ್ಷಣ ತಜ್ಞ ಕೆ. ಚಂದ್ರಶೇಖರ್ ಮತ್ತು ಕವಯಿತ್ರಿ ಡಾ. ಕೆ. ಷರೀಫಾ ಅವರನ್ನು ವಿಶೇಷವಾಗಿ ಗೌರವಿಸಲಾಗುವುದು ಎಂದು ಜಾಣಗೆರೆ ಪತ್ರಿಕೆ ಪ್ರಕಾಶನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
‘ನುಡಿಗೋಲು’ ಕೃತಿಯು 50 ಮಂದಿ ಆಸಾಮಾನ್ಯ ಹಾಗೂ ಶ್ರೀಸಾಮಾನ್ಯ ಸಾಧಕರನ್ನು ಕುರಿತ ಅಪೂರ್ವ ಬರಹಗಳನ್ನು ಹೊಂದಿರುವುದಾಗಿ ಲೇಖಕ ಪ್ರಕಾಶಕ ಜಾಣಗೆರೆ ವೆಂಕಟರಾಮಯ್ಯ ತಿಳಿಸಿದ್ದಾರೆ.
City Today News 9341997936

You must be logged in to post a comment.