
ಬಹುತೇಕ ಕಂಪನಿಗಳು ಉದ್ಯೋಗಕ್ಕಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸೆಲೆಕ್ಷನ್ ಗಾಗಿ ಪ್ರತಿಷ್ಠಿತ ಖಾಸಗಿ ಕಾಲೇಜುಗಳನ್ನೇ ಆಶ್ರಯಿಸುತ್ತಿರುವುದು ದುಃಖಕರ ವಿಚಾರವಾಗಿದೆ. ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳೂ ಪ್ರತಿಭಾನ್ವಿತರಾಗಿದ್ದಾರೆ. ಒಂದೇ ವಿಷಯವನ್ನು ಅಭ್ಯಾಸ ಮಾಡಿರುತ್ತಾರೆ. ಕಲಿಕೆಯ ಗುಣಮಟ್ಟವೂ ಒಂದೇ ಆಗಿರುತ್ತದೆ. ಎಲ್ಲ ವಿಚಾರಗಳಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಗೆ ಸರಿಸಮನಾಗಿದ್ದಾರೆ. ಅದರೂ ಕ್ಯಾಂಪಸ್ ಸೆಲೆಕ್ಷನ್ ಗೆ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಗೆ ಕಂಪನಿಗಳು ಮಣೆಹಾಕುತ್ತಿರುವುದು ನೋವಿನ ಸಂಗತಿಯಾಗಿದೆ.
ಕ್ಯಾಂಪಸ್ ಸೆಲೆಕ್ಷನ್ ಮಾಡುವ ಎಲ್ಲ ಕಂಪನಿಗಳು ಸರ್ಕಾರಿ ಕಾಲೇಜುಗಳನ್ನು ಪರಿಗಣಿಸಬೇಕು ಎಂಬುದು ಅಮ್ ಆತ್ಮ ಪಕ್ಷದ ಪ್ರಮುಖ ಒತ್ತಾಯವಾಗಿದೆ. ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಕ್ಯಾಂಪಸ್ ಸೆಲೆಕ್ಷನ್ ಗೆ ಸಿದ್ಧಗೊಳಿಸುವುದು ಹಾಗೂ ಕಂಪನಿಗಳು ಖಾಸಗಿ ಕಾಲೇಜುಗಳಿಗೆ ನೀಡುವ ಮಾನ್ಯತೆಯಂತೆ ಸರ್ಕಾರಿ ಕಾಲೇಜುಗಳಿಗೂ ಸಮನಾಗಿ ಆದ್ಯತೆ ನೀಡುವಂತೆ ಆಯಾ ಜಿಲ್ಲಾಧಿಕಾರಿಗಳು ಜವಾಬ್ದಾರಿ ವಹಿಸಬೇಕು ಎಂದು ಪಕ್ಷ ಒತ್ತಾಯಿಸುತ್ತಿದೆ.
ಈ ನಿಟ್ಟಿನಲ್ಲಿ ಆಮ್ ಆದ್ಮ ಪಕ್ಷವು ರಾಜ್ಯಾದ್ಯಂತ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಪರವಾಗಿ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಕುರಿತು ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಇಂದು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ವಿವರವಾಗಿ ಮಾತನಾಡಿದರು.
ಡಿಸೆಂಬರ್ 1ರಿಂದ 4ರವರೆಗೆ ಆಮ್ ಆದ್ಮ ಪಕ್ಷದ ಯುವ ಘಟಕ ರಾಜ್ಯಾದ್ಯಂತ 4 ದಿನಗಳ ಅಭಿಯಾನವನ್ನು ಹಮ್ಮಿಕೊಂಡಿದೆ. ಪ್ರಮಖವಾಗಿ ಡಿ.1ರಂದು ರಾಮನಗರ, ಡಿ.2ರಂದು ಮಂಡ್ಯ, ಡಿ.3ರಂದು ಮೈಸೂರು ಹಾಗೂ ಡಿ.4ರಂದು ಚಾಮರಾಜನಗರದಲ್ಲಿ ಅಭಿಯಾನವನ್ನು ನಡೆಸಲಿದೆ. ಉಳಿದಂತೆ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾ ಮಟ್ಟದ ಅಭಿಯಾನಗಳನ್ನು ನಡೆಸಲಿದ್ದಾರೆ. ಈ ಮೂಲಕ ಜಿಲ್ಲಾಧಿಕಾರಿಗಳ ಗಮನವನ್ನು ಸೆಳೆದು, ಸರ್ಕಾರಿ ವಿದ್ಯಾರ್ಥಿಗಳನ್ನು ಕ್ಯಾಂಪಸ್ ಆಯ್ಕೆಗೆ ಪರಿಗಣಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳವಂತೆ ಒತ್ತಡ ಹೇರಲಾಗುವುದು ಎಂದು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಲೋಹಿತ್ ಜಿ. ಹನುಮಾಪುರ ಮಾಹಿತಿ ನೀಡಿದರು.
City Today News 9341997936

You must be logged in to post a comment.