
ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ವತಿಯಿಂದ ಯಾದಗಿರಿ ಪಿ.ಎಸ್.ಐ.ಪರುಶುರಾಮ್ ಶಂಕಾಸ್ಪದ ಸಾವು ಕುರಿತು ಸಿಬಿಐ ತನಿಖೆಗೆ ವಹಿಸಿ ಎಂದು ಮಾಧ್ಯಮಗೋಷ್ಟಿ.
ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ರಾಜ್ಯಾಧ್ಯಕ್ಷರಾದ ಕ್ರಾಂತಿರಾಜುರವರು, ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಚಿದರಹಳ್ಳಿ ಮಹಾದೇವಸ್ವಾಮಿ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಯಂತ್ರಣ ಸಮಿತಿ ವಿ.ಗಿರಿಕುಮಾರ್, ಹಿರಿಯ ಹೋರಾಟಗಾರರಾದ ಉಮಾಶಂಕರ್, ಕಾರ್ಮಿಕರ ಒಕ್ಕೂಟದ ಅಧ್ಯಕ್ಷರಾದ ಬಿ.ದೇವರಾಜ್ ರವರು ಮತ್ತು ಹಿರಿಯ ಹೋರಾಟಗಾರರಾದ ಚಂದ್ರಶೇಖರ್ ಸ್ವಾಮಿ ಮಾಧ್ಯಮಗೋಷ್ಟಿಯಲ್ಲಿ ಭಾಗವಹಿಸಿದ್ದರು.
ಅಧ್ಯಕ್ಷರಾದ ಕ್ರಾಂತಿರಾಜುರವರು ಮಾತನಾಡಿ ಸ್ವಾತಂತ್ರ್ಯ ಬಂದ 77ವರ್ಷಗಳು ಕಳೆದರು ಇಂದು ಸಹ ದಲಿತರ ಮೇಲೆ ಜಾತಿನಿಂದನೆ, ದೌರ್ಜನ್ಯ ನಡೆಯುತ್ತಿದೆ.
ಇತ್ತಿಚೇಗೆ ರಾಜ್ಯದಲ್ಲಿ ದಲಿತ ಸಮುದಾಯದ ಅಧಿಕಾರಿಗಳು ಭ್ರಷ್ಟಚಾರದ ವಿರುದ್ದ ಸೆಣಸಲು ಆಗದೇ ಸಾವಿಗೆ ಶರಣುಗಾತ್ತಿದ್ದಾರೆ.

ಯಾದಗಿರಿ ಪೊಲೀಸ್ ಠಾಣೆ ಪಿ.ಎಸ್.ಐ. ಪರುಶುರಾಮ್ ಶಂಕಸ್ಪಾದ ಸಾವು ಸಂಭವಿಸಿದ ಕಾರಣ ಕುರಿತು ಪರುಶುರಾಮ್ ರವರ ಪತ್ನಿ ಶೈತ್ರಾ ರವರು ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ಮತ್ತು ಆತನ ಪುತ್ರ 30 ಲಕ್ಷ ರೂಪಾಯಿ ಲಂಚ ಬೇಡಿಕೆ ಹಾಗೂ ಜಾತಿ ನಿಂದನೆ ಮಾಡಿರುವುದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಪರುಶುರಾಮ್ ರವರು ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ.
ಶಾಸಕರ ಮತ್ತು ಮಗನಾ ಮೊಬೈಲ್ ಕಾಲ್ ರೆಕಾರ್ಡ್ ಮತ್ತು ಸಿ.ಸಿ.ಕ್ಯಾಮರ ಪರಿಶೀಲನೆ ಮಾಡಿ ತನಿಖೆ ಮಾಡಬೇಕು.
ರಾಜ್ಯದಲ್ಲಿರುವ ನಿಷ್ಟಾವಂತ ದಲಿತ ಸಮುದಾಯದ ಅಧಿಕಾರಿಗಳ ಮೇಲೆ ಕಿರುಕುಳ, ದೌರ್ಜನ್ಯ ನಡೆಯುತ್ತಿದೆ.
ಲಂಚ, ಭ್ರಷ್ಟಚಾರ ತಾಂಡವವಾಡುತ್ತಿದೆ, ಪ್ರತಿ ಹುದ್ದೆಗೆ ವರ್ಗಾವಣೆಗೆ ಇಂತಿಷ್ಟು ಲಂಚ ಫೀಕ್ಸ್ ಮಾಡಿದ್ದಾರೆ, ಇಂತಹ ಸಂದರ್ಭದಲ್ಲಿ ನಿಷ್ಟಾವಂತ, ಪ್ರಾಮಾಣಿಕ ಅಧಿಕಾರಿಗಳು ಕೆಲಸ ಮಾಡಲು ಸಾಧ್ಯವೆ.
ಅಧಿಕಾರಿಗಳನ್ನು ಎರಡು ವರ್ಷ ಅವಧಿಯ ಒಳಗಡೆ ವರ್ಗಾವಣೆ ಮಾಡುವಂತಿಲ್ಲ ಎಂಬ ನಿಯಮವಿದೆ ಅದರೆ ವರ್ಗಾವಣೆ ಮಾಡುವ ಹಿಂದಿನ ಉದ್ದೇಶವೇನು.
ಪೊಲೀಸ್ ಅಧಿಕಾರಿಗಳನ್ನು ಒಂದು ವರ್ಷದಲ್ಲಿ ವರ್ಗಾವಣೆ ಮಾಡಿದರೆ ಕಾನೂನು ಸುವ್ಯವಸ್ಥೆ ಹದಗೆಟ್ಟುತ್ತದೆ.
ಕೊಡಲೆ ಶಾಸಕ ಮತ್ತು ಆತನ ಪುತ್ರನನ್ನು ಬಂಧಿಸಬೇಕು ಇಲ್ಲದೇ ಹೋದರೆ ಮುಂದಿನ ವಾರ ಪೊಲೀಸ್ ಮಹಾನಿರ್ದೇಶಕರ ಕಛೇರಿ ಮುಂಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ದಲಿತ ಸಮುದಾಯ ಮುಖಂಡರು, ಚಿಂತಕರು, ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ಮಾಡಿ ಸಲ್ಲಿಸಲಾಗುವುದು.
ಪಿ.ಎಸ್.ಐ.ಪರುಶುರಾಮ್ ಶಂಕಾಸ್ಪದ ಸಾವಿಗೆ ನ್ಯಾಯ ಸಿಗಬೇಕು ಎಂದರೆ ಮುಖ್ಯಮಂತ್ರಿಗಳು ಸಿಬಿಐ ತನಿಖೆಗೆ ವಹಿಸಬೇಕು ಎಂಬುದು ನಮ್ಮ ಅಗ್ರಹ ಎಂದು ಕ್ರಾಂತಿ ರಾಜು-ರಾಜ್ಯಾಧ್ಯಕ್ಷರು ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ(ರಿ)ರವರು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಹೇಳಿದರು.
City Today News 9341997936

You must be logged in to post a comment.