ಬಡಿಗೇರ್ ಸಮುದಾಯದ ಕುರಿತ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

ವಿಶ್ವಕರ್ಮ ಸಮುದಾಯದ ಕುಶಲಕರ್ಮಿಗಳಾದ ಬಡಿಗೇರ ಸಮುದಾಯದ ಕುರಿತಾದ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ನೀಡಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಎಸ್.ಜೆ.ಎಂ. ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಐ.ಬಿ.ಬಡಿಗೇರ್ ಹಾಗೂ ರಾಜೇಶ್ವರಿ ಬಡಿಗೇರ್ ಅವರ ಮಗನಾದ ಮಂಜುನಾಥ ಬಡಿಗೇರ್ ಅವರು ಡಾ. ಶಿವಪುತ್ರ ಪೋತಲಕರ, ಸಹ ಪ್ರಾಧ್ಯಾಪಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಹಾಪೂರ ಅವರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಅಧ್ಯಯನ ವಿಭಾಗಕ್ಕೆ ಸಮಾಜಶಾಸ್ತ್ರ ವಿಷಯದಲ್ಲಿ ಸಾದಾರಪಡಿಸಿದ “ ಬಡಿಗೇರ್ ಸಮುದಾಯದ ಸಾಮಾಜಿಕ ಸ್ಥಿತ್ಯಂತರಗಳು ಎಂಬ ಮಹಾಪ್ರಬಂಧಕ್ಕೆ ವಿಶ್ವವಿದ್ಯಾಲಯದ ಪರೀಕ್ಷಾ ಮಂಡಳಿ, ಕನ್ನಡ ವಿಶ್ವವಿದ್ಯಾಲಯ ಅಧಿನಿಯಮ ಹಾಗೂ ಪಿಹೆಚ್.ಡಿ ಪದವಿ ನಿಯಮಗಳ ಅನುಸಾರ ಈ ಮಹಾಪ್ರಬಂಧಕ್ಕೆ ಅತ್ಯುತ್ತಮ ಶ್ರೇಣಿಯದ್ದು ಎಂದು ಪರಿಗಣಿಸಿ ಇವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ೩೨ನೇ ಘಟಿಕೋತ್ಸವದಲ್ಲಿ ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಮಂಜುನಾಥ ಬಡಿಗೇರ್‌ಗೆ ಡಾಕ್ಟರೇಟ್ ಪದವಿ ಪ್ರಧಾನ ಮಾಡಿದರು.

ಸಿಟಿ ಟುಡೇ ನ್ಯೂಸ್ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು

City Today News 9341997936