
ಬೆಂಗಳೂರು : ಪರಮಪೂಜ್ಯ ಶ್ರೀ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್. ಕೆ. ವಾದೀಂದ್ರಾಚಾರ್ಯರ ಮಾರ್ಗದರ್ಶನದಲ್ಲಿ “ಪೌರ್ಣಮಿ” ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿಯ ವ್ರತ ಪೂಜೆಯು ಪುರೋಹಿತರಾದ ಶ್ರೀ ನಂದಕಿಶೋರಾಚಾರ್ಯರು ಹಾಗೂ ಕಟ್ಟಿ ರಾಘವೇಂದ್ರ ಆಚಾರ್ಯರು “ಲೋಕ ಕಲ್ಯಾಣ”ಕ್ಕಾಗಿ ಪ್ರಾರ್ಥಿಸಿ ನೆರವೇರಿಸಿದರು. ಈ ಸಂದರ್ಭದಲ್ಲಿ ಭಕ್ತರು ಮತ್ತು ಸೇವಾ ಕರ್ತೃಗಳು ಸಂಕಲ್ಪವನ್ನು ಮಾಡಿ ವ್ರತ ಪೂಜೆಯಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.
City Today News 9341997936

You must be logged in to post a comment.