
ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ರೌಡಿ ಆಸಾಮಿಯಾದ ಶಿವರಾಜ @ ಕುಳ್ಳ ಶಿವ ಈತನು ಹಲ್ಲೆ, ಕೊಲೆಯತ್ನ, ಕೊಲೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆತನ ವಿರುದ್ದ ಬ್ಯಾಡರಹಳ್ಳಿ, ತಾವರೆಕೆರೆ, ಮಾದನಾಯಕನಹಳ್ಳಿ, ಕುಂಬಳಗೂಡು ಪೊಲೀಸ್ ಠಾಣೆಗಳಲ್ಲಿ ಒಟ್ಟು 10 ಪ್ರಕರಣಗಳು ದಾಖಲಾಗಿರುತ್ತವೆ. ಸದರಿ ಆಸಾಮಿಯ ಪದೇ ಪದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿದ್ದು, ಆತನ ರೌಡಿ ಚಟುವಟಿಕೆಗಳನ್ನು ನಿಯಂತ್ರಿಸುವ ಸಲುವಾಗಿ ಕರ್ನಾಟಕ ಪೊಲೀಸ್ ಅಧಿನಿಯಮದ ಪ್ರಕಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿ.ಬಿ.ಎಂ.ಪಿ ವ್ಯಾಪ್ತಿಯ ಪ್ರದೇಶವನ್ನು ಪ್ರವೇಶಿಸದಂತೆ ಗಡಿಪಾರು ಆದೇಶ ಹೊರಡಿಸಲು ಕೋರಿ ಮಾನ್ಯ ಜಂಟಿ ಪೊಲೀಸ್ ಆಯುಕ್ತರು (ಅಪರಾಧ) ಬೆಂಗಳೂರು ನಗರ ರವರ ಸೂಚನೆಯಂತೆ ಸಿಸಿಬಿ ಸಂಘಟಿತ ಅಪರಾಧ ದಳ (ಪಶ್ಚಿಮ) ಅಧಿಕಾರಿಗಳು ಮಾನ್ಯ ಉಪ ಪೊಲೀಸ್ ಆಯುಕ್ತರು, ಪಶ್ಚಿಮ ವಿಭಾಗ ರವರಿಗೆ ವರದಿಯನ್ನು ಸಲ್ಲಿಸಿದ್ದು, ಸದರಿ ರೌಡಿ ಆಸಾಮಿಯ ವಿರುದ್ಧ ದಿನಾಂಕ 18.08.2023 ರಿಂದ 17.08.2024 ರ ವರೆಗೆ 01 ವರ್ಷದ ಅವಧಿಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ವ್ಯಾಪ್ತಿಯ ಪ್ರದೇಶವನ್ನು ಪ್ರವೇಶಿಸದಂತೆ ತುಮಕೂರು ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿರುತ್ತಾರೆ.
City Today News 9341997936

You must be logged in to post a comment.