
ಬೆಂಗಳೂರು: ಪ್ರೆಸ್ ಕ್ಲಬ್ ಆಫ್ ಬೆಂಗಳೂರುನಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾರ್ಚ್ 1ರಂದು ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವವನ್ನು ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ವತಿಯಿಂದ ಆಚರಿಸಲಾಗುವುದು ಎಂದು ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ರಾಜ್ಯ ಯುವ ಘಟಕದ ಅಧ್ಯಕ್ಷ ಮನೋಹರ್ ಅಬ್ಬಿಗೆರೆ ತಿಳಿಸಿದರು. ಸಮಾಜದಲ್ಲಿ ಶ್ರೇಯೋಭಿವೃದ್ಧಿಗೆ ಜಗದ್ಗುರು ರೇಣುಕಾಚಾರ್ಯರ ತತ್ತ್ವ-ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವೆಂದರು.

ಕಾರ್ಯಕ್ರಮವು ಬೆಳಗ್ಗೆ 11 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದ್ದು, ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶಿವರಾಜ್ ಎಸ್. ತಂಗಡಗಿ ಮತ್ತು ಈಶ್ವರ್ ಖಂಡ್ರೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾಸಕ ಉದಯ್ ಗರುಡಚಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಳಗ್ಗೆ 10ಕ್ಕೆ ಹಡ್ಸನ್ ಸರ್ಕಲ್‌ನಿಂದ ಪ್ರತಿಮೆ ಹೊತ್ತ ಮೆರವಣಿಗೆ ಕಲಾತಂಡಗಳೊಂದಿಗೆ ಕಲಾಕ್ಷೇತ್ರದವರೆಗೆ ಸಾಗಲಿದೆ. ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ. ರಾಜ್ಯದ ಭಕ್ತರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟನೆ ಮನವಿ ಮಾಡಿದೆ.
City Today News 9341997936

You must be logged in to post a comment.