ಮಹಿಳೆಯರ ಗೌರವ ನಮ್ಮೆಲ್ಲರ ಆದ್ಯ ಕರ್ತವ್ಯ: ಜಿ.ಆರ್. ಪ್ರದೀಪ್
ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಮಹಿಳಾ ದಿನಾಚರಣೆ

ಬೆಂಗಳೂರು: ಮಹಿಳೆಯರನ್ನು ಗೌರವಿಸುವ ಮನೋಭಾವ ಸಮಾಜದಲ್ಲಿ ನಿರಂತರವಾಗಿ ಬಲಪಡಬೇಕು ಎಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಜ್ಯಾಧ್ಯಕ್ಷ ಜಿ.ಆರ್. ಪ್ರದೀಪ್ ಅಭಿಪ್ರಾಯಪಟ್ಟರು.
ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ದಕ್ಷಿಣ ಮಹಿಳಾ ಘಟಕದ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಮಹಿಳೆಯರನ್ನು ಪೂಜನೀಯ ಸ್ಥಾನದಲ್ಲಿ ಕಾಣುವ ಮನೋಭಾವ ಬೆಳೆಸಬೇಕಿದೆ. ಮಹಿಳಾ ಶಕ್ತಿಗೆ ಗೌರವ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿದರು.
ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕಾರ್ಯ ಮುಂದುವರಿಯಬೇಕು ಎಂದು ಮಹಾಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಜೋಶಿ ತಿಳಿಸಿದರು. ವಿವಿಧ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪದಾಧಿಕಾರಿಗಳು ಹಾಗೂ ಸದಸ್ಯರು ನೋಂದಣಿಯಾಗುವಂತೆ ಸದಸ್ಯತ್ವ ಅಭಿಯಾನವನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಾಮೂಹಿಕ ಮಹಾಲಕ್ಷ್ಮಿ ಪೂಜೆ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಿತು.
ಕಾರ್ಯಕ್ರಮದಲ್ಲಿ ಮಹಾಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಜೋಶಿ, ಬೆಂಗಳೂರು ದಕ್ಷಿಣ ಘಟಕದ ಅಧ್ಯಕ್ಷೆ ಪೂರ್ಣಿಮಾ, ರಾಜ್ಯ ಯುವ ಘಟಕದ ಅಧ್ಯಕ್ಷ ಕಾರ್ತಿಕ್ ಸೋಮಯಾಜಿ, ರಾಜ್ಯ ಉದ್ಯಮ ವಿಭಾಗದ ಅಧ್ಯಕ್ಷ ಶ್ರೀಧರ್, ಬೆಂಗಳೂರು ದಕ್ಷಿಣ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಸೂರ್ಯನಾರಾಯಣ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
City Today News 9341997936

You must be logged in to post a comment.