ಬೆಂಗಳೂರು, ಜನವರಿ 29, 2026:
ಹೊಸಾಗಿ ಸ್ಥಾಪನೆಯಾದ ಜನತಾ ಚಳುವಳಿ ಭಾರತ ರಾಜಕೀಯ ಪಕ್ಷದ ವತಿಯಿಂದ, ಮುಂಬರುವ ಮಹತ್ವದ ಚುನಾವಣೆಗಳ ಸಿದ್ಧತೆ ಹಾಗೂ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರುನಲ್ಲಿ ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಓಬಳೇಶಪ್ಪ ಬಿ.ಟಿ., ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಆಲ್ವಿನ್ ಆಂಟೊನಿ ರಾಜ್, ಹಾಗೂ ಪಕ್ಷದ ಹಿರಿಯ ನಾಯಕರುಗಳಾದ ತೇಜುರಾಮ್ ಶೆಟ್ಟಿ, ಎಂ. ಬಸವಲಿಂಗಪ್ಪ ಮತ್ತು ಶ್ರೀಕಾಂತ್ ಅವರು ಭಾಗವಹಿಸಿ ಪಕ್ಷದ ಭವಿಷ್ಯದ ರಾಜಕೀಯ ಕಾರ್ಯತಂತ್ರ ಮತ್ತು ಚುನಾವಣಾ ಸಿದ್ಧತೆಗಳ ಬಗ್ಗೆ ವಿವರಿಸಿದರು.
ಮುಂಬರುವ ಚುನಾವಣೆಗಳಿಗೆ ಪಕ್ಷದ ಸಿದ್ಧತೆ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯಕರು, ಜನತಾ ಚಳುವಳಿ ಭಾರತ ಪಕ್ಷವು ಜನಪರ ರಾಜಕೀಯವನ್ನು ಮುನ್ನಡೆಸುವ ಉದ್ದೇಶದಿಂದ ಸಂಘಟಿತವಾಗಿ ಮುಂಬರುವ ಚುನಾವಣೆಗಳಿಗೆ ಸಜ್ಜಾಗುತ್ತಿದೆ ಎಂದು ತಿಳಿಸಿದರು.
ಈ ಹಿನ್ನೆಲೆ, 2026ರಲ್ಲಿ ನಡೆಯಲಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷ ಸ್ಪರ್ಧಿಸುವ ನಿರ್ಧಾರ ಕೈಗೊಂಡಿದೆ.
ಕರ್ನಾಟಕದಲ್ಲಿ ತೆರವಾಗಿರುವ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು.
ಸ್ಥಳೀಯ ಸಂಸ್ಥೆಗಳ ಚುನಾವಣೆಗಳು, ವಿಶೇಷವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA), ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದೆ ಎಂದು ಘೋಷಿಸಿದರು.
ಅದಕ್ಕಾಗಿ ಕ್ಷೇತ್ರ ಮಟ್ಟದಲ್ಲಿ ಉಸ್ತುವಾರಿಗಳ ನೇಮಕ, ಪಕ್ಷದ ಸಂಘಟನೆ ಬಲಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದರು.
ಚುನಾವಣಾ ಪ್ರಣಾಳಿಕೆಯ ಪ್ರಮುಖ ಅಂಶಗಳು
ಪಕ್ಷದ ಚುನಾವಣಾ ಪ್ರಣಾಳಿಕೆಯ ಮುಖ್ಯ ಅಂಶಗಳನ್ನು ವಿವರಿಸಿದ ನಾಯಕರು, ಜನಸಾಮಾನ್ಯರ ದಿನನಿತ್ಯದ ಸಮಸ್ಯೆಗಳಿಗೆ ಪರಿಹಾರ ನೀಡುವ ಸ್ಪಷ್ಟ ಕಾರ್ಯಯೋಜನೆ ತಮ್ಮದಾಗಿದೆ ಎಂದು ಹೇಳಿದರು.
ಪ್ರಣಾಳಿಕೆಯ ಪ್ರಮುಖ ಅಂಶಗಳು ಹೀಗಿವೆ:
ಸ್ಥಳೀಯ ಆಡಳಿತದ ಸುಧಾರಣೆ ಮತ್ತು ಜನಸ್ನೇಹಿ ಆಡಳಿತ ವ್ಯವಸ್ಥೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮೂಲಕ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿ:
ಸುಗಮ ಮತ್ತು ವೈಜ್ಞಾನಿಕ ಸಂಚಾರ ವ್ಯವಸ್ಥೆ
ವೈಜ್ಞಾನಿಕ ಕಸ ವಿಲೇವಾರಿ
ಕುಡಿಯುವ ನೀರಿಗೆ ಶಾಶ್ವತ ಪರಿಹಾರ
ರೈತರು ಮತ್ತು ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಆದ್ಯತೆ.
ಪ್ರಾದೇಶಿಕ ಅಸ್ಮಿತೆ ಮತ್ತು ಸ್ಥಳೀಯ ಸಂಸ್ಕೃತಿಯ ರಕ್ಷಣೆ.
ಪ್ರಸ್ತುತ ಅಧಿಕಾರದಲ್ಲಿರುವ ಪಕ್ಷಗಳ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವುದು –
ನಿರಂತರ ಬೆಲೆ ಏರಿಕೆ,
ನಿರುದ್ಯೋಗ,ಜನವಿರೋಧಿ ನೀತಿಗಳ ವಿರುದ್ಧ ಸ್ಪಷ್ಟ ಹೋರಾಟ.
ಚುನಾವಣಾ ಪಾರದರ್ಶಕತೆಗೆ ಒತ್ತು
ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ (Ballot Paper) ಬಳಸುವ ನಿರ್ಧಾರವನ್ನು ಸ್ವಾಗತಿಸುವುದಾಗಿ ಪಕ್ಷದ ನಾಯಕರು ತಿಳಿಸಿದರು. ಇದು ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಜನರ ನಂಬಿಕೆಯನ್ನು ಹೆಚ್ಚಿಸುವ ಮಹತ್ವದ ಹೆಜ್ಜೆ ಎಂದು ಅವರು ಅಭಿಪ್ರಾಯಪಟ್ಟರು.
ಒಟ್ಟಾರೆ, ಜನತಾ ಚಳುವಳಿ ಭಾರತ ಪಕ್ಷವು ಪರ್ಯಾಯ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಲು ಸಿದ್ಧವಾಗಿದ್ದು, ಜನರ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಕ್ರಿಯ ರಾಜಕೀಯ ಚಟುವಟಿಕೆಗಳನ್ನು ನಡೆಸಲಿದೆ ಎಂದು ನಾಯಕರು ತಿಳಿಸಿದರು.
City Today News 9341997936

You must be logged in to post a comment.