ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ನಮ್ಮ ಹಕ್ಕಾಗಿದ್ದು, ಸುಪ್ರೀಂಕೋರ್ಟ್ ಈ ನಿಟ್ಟಿನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವುದು ಉತ್ತಮ ಬೆಳವಣಿಗೆ – ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಸಭಾಧ್ಯಕ್ಷರು.

ಮಕ್ಕಳಿಗೆ ಮಾತೃಭಾಷಾ ಮಾಧ್ಯಮದಲ್ಲಿಯೇ ಶಿಕ್ಷಣ ನೀಡುವುದು ಅಗತ್ಯ ಎಂದು ಸುಪ್ರೀಂಕೋರ್ಟ್ ಪ್ರತಿಪಾದಿಸಿರುವುದನ್ನು ನಾನು ಸಂತೋಷದಿಂದ ಸ್ವಾಗತಿಸುತ್ತೇನೆ. ಭಾಷೆಯೊಂದಿಗೆ ಸಂಸ್ಕೃತಿಯೂ ಸಮ್ಮಿಳಿತವಾಗಿರುತ್ತದೆ. ಮಾತೃ ಭಾಷೆಯನ್ನು ಮುಂದಿನ ಪೀಳಿಗೆಗೆ ಉಳಿಸಿ, ಬೆಳೆಸಿ, ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಮಾತೃಭಾಷೆಯಲ್ಲಿ ಶಿಕ್ಣಣ ನೀಡುವುದರಿಂದ ಅವರ ಜ್ಞಾನಾರ್ಜನೆಗೆ ಅನುಕೂಲವಾಗುವುದಲ್ಲದೇ ಭಾಷೆಯ ಉಳಿವು ಮತ್ತು ಬೆಳವಣಿಗೆಗೂ ಕಾರಣವಾಗುತ್ತದೆ. ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ನಮ್ಮ ಹಕ್ಕಾಗಿದ್ದು, ಸುಪ್ರೀಂಕೋರ್ಟ್ ಈ ನಿಟ್ಟಿನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವುದು ಉತ್ತಮ ಬೆಳವಣಿಗೆಯಾಗಿದೆ.

ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ
ಸಭಾಧ್ಯಕ್ಷರು.
ಕರ್ನಾಟಕ ವಿಧಾನ ಸಭೆ.

City Today News

(citytoday.media)

9341997936