
ಕನ್ನಡ ಚಲನಚಿತ್ರ ರಂಗದ ಹೆಸರಾಂತ ಹಿರಿಯ ಸಂಗೀತ ನಿರ್ದೇಶಕ ಶ್ರೀ ರಾಜನ್ ಅವರು ನಿಧನರಾದ ಸುದ್ದಿ ನನ್ನ ಮನಸ್ಸಿಗೆ ತೀವ್ರ ನೋವನ್ನು ಉಂಟುಮಾಡಿದೆ.
ಅನೇಕ ಜನಪ್ರಿಯ ಕನ್ನಡ ಚಲನಚಿತ್ರಗಳಿಗೆ ಸಂಗೀತ ನೀಡಿದ್ದ ರಾಜನ್ ಅವರ ನಿಧನದಿಂದಾಗಿ ಕನ್ನಡ ಚಲನಚಿತ್ರರಂಗವು ಅನಾಥವಾಗಿದೆ.

ತಮ್ಮ ಸಹೋದರರಾಗಿದ್ದ ಮತ್ತೊಬ್ಬ ಪ್ರಖ್ಯಾತ ಸಂಗೀತ ನಿರ್ದೇಶಕ ಶ್ರೀ ನಾಗೇಂದ್ರ ಅವರೊಂದಿಗೆ ‘ರಾಜನ್-ನಾಗೇಂದ್ರ’ ಹೆಸರಿನಲ್ಲಿ ಜಂಟಿಯಾಗಿ ನೂರಾರು ಕನ್ನಡ ಚಲನಚಿತ್ರಗಳಿಗೆ ಈ ಜೋಡಿ ಸಂಗೀತ ನಿರ್ದೇಶನ ಮಾಡಿದ್ದರು.
ಕನ್ನಡ ಚಲನಚಿತ್ರ ರಸಿಕರು ಎಂದಿಗೂ ಮರೆಯಲಾರದ ತಮ್ಮ ನೂರಾರು ಸುಮಧುರ ಗೀತೆಗಳ ಮೂಲಕ ಶ್ರೀ ರಾಜನ್ ಅವರು ಸದಾ ನಮ್ಮ ನೆನಪಿನಲ್ಲಿ ಇರುತ್ತಾರೆ.
ದಿವಂಗತ ಶ್ರೀ ರಾಜನ್ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಮತ್ತು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರಿಗೆ ಮತ್ತು ಅಪಾರ ಸಂಗೀತ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಓಂ ಶಾಂತಿ:
- ಶ್ರೀ ರಮೇಶ್ ಜಾರಕಿಹೊಳಿ ಜಲಸಂಪನ್ಮೂಲ ಸಚಿವರು
City Today News
(citytoday.media)
9341997936

You must be logged in to post a comment.