ಶಶಿ ಹುಲಿಕುಂಟೆಮಠಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ: ಗಣ್ಯರ ಮನವಿ

ಬೆಂಗಳೂರು: ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ವಿವಿಧ ಕ್ಷೇತ್ರಗಳ ಗಣ್ಯರು ಪದವೀಧರ ಸಮುದಾಯಕ್ಕೆ ಮನವಿ ಮಾಡಿದ್ದಾರೆ.

ಸಮಾಜಮುಖಿ ಚಿಂತನೆ ಹಾಗೂ ಜನಪರ ನಿಲುವುಗಳ ಮೂಲಕ ಶಶಿ ಹುಲಿಕುಂಟೆಮಠ ಅವರು ಈಗಾಗಲೇ ಯುವ ಮುಖಂಡರಾಗಿ ಗುರುತಿಸಿಕೊಂಡಿದ್ದಾರೆ. ಪದವೀಧರರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು, ಅವುಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಅವರಲ್ಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಯುವ ಅಭ್ಯರ್ಥಿಯಾಗಿ ಶಶಿ ಅವರಿಗೆ ಅವಕಾಶ ನೀಡಿರುವುದು ಸ್ವಾಗತಾರ್ಹ ಎಂದು ಗಣ್ಯರು ಅಭಿಪ್ರಾಯಪಟ್ಟಿದ್ದಾರೆ.

ಇದು ಹೊಸ ತಲೆಮಾರಿನ ಕಾಲ. ಯುವಜನತೆ ದೇಶ ಮತ್ತು ರಾಜ್ಯದ ಬೆಳವಣಿಗೆ, ಸಾಮಾಜಿಕ ಸಮಸ್ಯೆಗಳು ಹಾಗೂ ಪ್ರಜಾಪ್ರಭುತ್ವದ ವಿಚಾರಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿದೆ. ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ದೇಶದಾದ್ಯಂತ ಯುವಕರು ಹೋರಾಟಗಳನ್ನು ರೂಪಿಸಿ, ಜನರ ಗಮನ ಸೆಳೆದಿರುವ ಹಲವು ಉದಾಹರಣೆಗಳಿವೆ. ಇಂತಹ ಸಂದರ್ಭದಲ್ಲಿ ಯುವ ನಾಯಕತ್ವಕ್ಕೆ ಹೆಚ್ಚಿನ ಅವಕಾಶ ದೊರೆಯಬೇಕಿದೆ ಎಂದು ಅವರು ಹೇಳಿದ್ದಾರೆ.

ಪದವೀಧರ ಕ್ಷೇತ್ರದ ಪ್ರತಿನಿಧಿಯಾಗಿ ಶಶಿ ಹುಲಿಕುಂಟೆಮಠ ಅವರಂತಹ ಯುವಕರು ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಇರಬೇಕಿದೆ. ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಸಮಾಜದ ಮುಂದೆ ಇರುವ ಸವಾಲುಗಳನ್ನು ಅರ್ಥಮಾಡಿಕೊಂಡಿರುವ ಯುವ ನಾಯಕತ್ವವು ಪದವೀಧರರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಸದನದಲ್ಲಿ ಪ್ರಸ್ತಾಪಿಸಲು ನೆರವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಬಸವ ಪ್ರಜ್ಞೆ ಮತ್ತು ಕುವೆಂಪು ಅವರ ಚಿಂತನೆಗಳಿಂದ ಪ್ರೇರಣೆ ಪಡೆದಿರುವ ಶಶಿ ಹುಲಿಕುಂಟೆಮಠ ಅವರಿಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಗಣ್ಯರು ಹೇಳಿದ್ದಾರೆ. ಪದವೀಧರ ಸಮುದಾಯವು ಈ ಮನವಿಯನ್ನು ಪರಿಗಣಿಸಿ, ಶಶಿ ಹುಲಿಕುಂಟೆಮಠ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ.

ಬೆಂಬಲಿಸಿದವರು:
ಡಾ. ಎಲ್. ಹನುಮಂತಯ್ಯ, ಅಗ್ರಹಾರ ಕೃಷ್ಣಮೂರ್ತಿ, ಮಾವಳ್ಳಿ ಶಂಕರ್, ಡಾ. ಎಂ.ಎಚ್. ನಾಗರಾಜ್, ಡಾ. ಸಿ.ಜಿ. ಲಕ್ಷ್ಮೀಪತಿ, ಎಸ್.ಜಿ. ಸಿದ್ದರಾಮಯ್ಯ, ಡಾ. ಎಚ್.ಎಸ್. ಶಿವಪ್ರಕಾಶ್, ಕೆ. ಷರೀಫಾ, ಡಾ. ಬಂಜಗೆರೆ ಜಯಪ್ರಕಾಶ್, ಸುಬ್ಬು ಹೊಲೆಯಾರ್, ರುದ್ರಪ್ಪ ಹನಗವಾಡಿ, ಡಾ. ಮಂಜುನಾಥ ಅದ್ದೆ ಹಾಗೂ ಎಲ್.ಎನ್.

City Today News 9341997936